AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಅಂತರ ಕಾಪಾಡಿ ಅಂದಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ

ಮಂಡ್ಯ: ಎಲ್ಲೆಡೆ ಕೊರೊನಾ ಹೆಚ್ಚಾಗುತ್ತಿದೆ. ಹೀಗಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಗ್ರಾಮಸ್ಥರಿಗೆ ತಿಳಿಹೇಳುತ್ತಿದ್ದ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ವರದಿಯಾಗಿದೆ. ಮಂಡ್ಯ ಜಿಲ್ಲೆ ಕೆಆರ್‌ ಪೇಟೆ ತಾಲೂಕಿನ ಮೊಸಳೆ ಕೊಪ್ಪಲು ಗ್ರಾಮದ ಆಶಾ ಕಾರ್ಯಕರ್ತೆ, ಗ್ರಾಮಸ್ಥರಿಗೆ ಬೆಂಗಳೂರಿನಲ್ಲಿ ಕೊರೊನಾ ದಿನೇ ದಿನೆ ಹೆಚ್ಚಾಗುತ್ತಿದೆ. ಹೀಗಾಗಿ ಬೆಂಗಳೂರಿನಿಂದ ಬರುವವರ ಜತೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ತಿಳಿ ಹೇಳುತ್ತಿದ್ದರು. ಇದು ಬೆಂಗಳೂರಿನಿಂದ ಆಗಾಗ ಗ್ರಾಮಕ್ಕೆ ಬರುತ್ತಿದ್ದ ಮಂಜೇಗೌಡ ಎಂಬ ವ್ಯಕ್ತಿಗೆ ಸಿಟ್ಟು […]

ಸಾಮಾಜಿಕ ಅಂತರ ಕಾಪಾಡಿ ಅಂದಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ
Guru
| Edited By: |

Updated on: Jul 05, 2020 | 1:37 PM

Share

ಮಂಡ್ಯ: ಎಲ್ಲೆಡೆ ಕೊರೊನಾ ಹೆಚ್ಚಾಗುತ್ತಿದೆ. ಹೀಗಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಗ್ರಾಮಸ್ಥರಿಗೆ ತಿಳಿಹೇಳುತ್ತಿದ್ದ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ವರದಿಯಾಗಿದೆ.

ಮಂಡ್ಯ ಜಿಲ್ಲೆ ಕೆಆರ್‌ ಪೇಟೆ ತಾಲೂಕಿನ ಮೊಸಳೆ ಕೊಪ್ಪಲು ಗ್ರಾಮದ ಆಶಾ ಕಾರ್ಯಕರ್ತೆ, ಗ್ರಾಮಸ್ಥರಿಗೆ ಬೆಂಗಳೂರಿನಲ್ಲಿ ಕೊರೊನಾ ದಿನೇ ದಿನೆ ಹೆಚ್ಚಾಗುತ್ತಿದೆ. ಹೀಗಾಗಿ ಬೆಂಗಳೂರಿನಿಂದ ಬರುವವರ ಜತೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ತಿಳಿ ಹೇಳುತ್ತಿದ್ದರು. ಇದು ಬೆಂಗಳೂರಿನಿಂದ ಆಗಾಗ ಗ್ರಾಮಕ್ಕೆ ಬರುತ್ತಿದ್ದ ಮಂಜೇಗೌಡ ಎಂಬ ವ್ಯಕ್ತಿಗೆ ಸಿಟ್ಟು ತರಿಸಿದೆ. ಹೀಗಾಗಿ ಆತ ಮತ್ತು ಆತನ ಸಹಚರರಾದ ಚಂದನ್, ದರ್ಶನ್, ದೇವರಾಜು, ರಘು, ಪ್ರಸನ್ನ ಹಾಗೂ ಅಭಿ ಎಂಬುವವರು ಸೇರಿ ಆಶಾ ಕಾರ್ಯಕರ್ತೆ ಮತ್ತು ಆಕೆಯ ಗಂಡನ ಮೇಲೆ ಹಲ್ಲೆ ಮಾಡಿದ್ದಾರೆನ್ನಲಾಗಿದೆ.

ಹಲ್ಲೆಗೊಳಗಾಗಿರುವ ಆಶಾ ಕಾರ್ಯಕರ್ತೆ ಮತ್ತು ಆಕೆಯ ಗಂಡನಿಗೆ ಗಂಭೀರ ಗಾಯಗಳಾಗಿದ್ದು, ಕೆಆರ್‌ ‌ಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಕೆಆರ್‌ ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆದ್ರೆ ಆಶಾ ಕಾರ್ಯಕರ್ತೆಯ ಮೇಲೆ ಈ ರೀತಿ ಹಲ್ಲೆ ಮಾಡಿದ್ದು ಇನ್ನುಳಿದ ಆಶಾ ಕಾರ್ಯಕರ್ತೆಯಲ್ಲಿ ಭಯ ಮೂಡಿಸಿದೆ. ತಮಗೆ ಸೂಕ್ತ ರಕ್ಷಣೆ ನೀಡಿ, ಇಲ್ಲವಾದ್ರೆ ನಮ್ಮ ಪಾಡಿಗೆ ನಮ್ಮನ್ನ ಬಿಟ್ಟುಬಿಡಿ ಎಂದು ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್