ಕೊರೊನಾ ನಡುವೆ ಕೋಲಾರದಲ್ಲಿ ಕಳೆಗಟ್ಟಿದ ರಂಜಾನ್‌ ಸಡಗರ

ಕೋಲಾರ: ಲಾಕ್‌ಡೌನ್‌ ನಡುವೆಯೂ ಕೋಲಾರದಲ್ಲಿ ರಂಜಾನ್‌ ಮಾಸದ ರಂಗು ಕಳೆಗಟ್ಟಿದೆ. ಉಪವಾಸ, ಪ್ರಾರ್ಥನೆ, ದುಡಿಮೆಯಲ್ಲಿ ಅಲ್ಲಾಹುನನ್ನು ಕಾಣುತ್ತಿರುವ ಮುಸ್ಲಿಮರು ರಾತ್ರಿ ಮೂಡುವ ಚಂದ್ರನಿಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ನಗರದಲ್ಲಿ 50ಕ್ಕೂ ಹೆಚ್ಚು ಮಸೀದಿಗಳಿವೆ. ರಂಜಾನ್ ಮಾಸದಲ್ಲಿ ದಿನಕ್ಕೆ 5 ಬಾರಿ ಪ್ರಾರ್ಥನೆ (ನಮಾಜ್) ಮಾಡುವುದು ಕಡ್ಡಾಯ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಜಿಲ್ಲಾಡಳಿತವು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಿದೆ. ಹೀಗಾಗಿ ವ್ರತನಿಷ್ಠ ಮುಸ್ಲಿಂ ಸಮುದಾಯದವರು ತಮ್ಮ ಮನೆಗಳಲ್ಲೇ ಪ್ರಾರ್ಥನೆ ಮಾಡುತ್ತಿದ್ದಾರೆ. ಮುಸ್ಲಿಮರ ಮನ ಮತ್ತು ಮನೆಗಳು ಪ್ರಾರ್ಥನೆಯ […]

ಕೊರೊನಾ ನಡುವೆ ಕೋಲಾರದಲ್ಲಿ ಕಳೆಗಟ್ಟಿದ ರಂಜಾನ್‌ ಸಡಗರ
Follow us
ಆಯೇಷಾ ಬಾನು
| Updated By:

Updated on:May 24, 2020 | 11:25 AM

ಕೋಲಾರ: ಲಾಕ್‌ಡೌನ್‌ ನಡುವೆಯೂ ಕೋಲಾರದಲ್ಲಿ ರಂಜಾನ್‌ ಮಾಸದ ರಂಗು ಕಳೆಗಟ್ಟಿದೆ. ಉಪವಾಸ, ಪ್ರಾರ್ಥನೆ, ದುಡಿಮೆಯಲ್ಲಿ ಅಲ್ಲಾಹುನನ್ನು ಕಾಣುತ್ತಿರುವ ಮುಸ್ಲಿಮರು ರಾತ್ರಿ ಮೂಡುವ ಚಂದ್ರನಿಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ನಗರದಲ್ಲಿ 50ಕ್ಕೂ ಹೆಚ್ಚು ಮಸೀದಿಗಳಿವೆ.

ರಂಜಾನ್ ಮಾಸದಲ್ಲಿ ದಿನಕ್ಕೆ 5 ಬಾರಿ ಪ್ರಾರ್ಥನೆ (ನಮಾಜ್) ಮಾಡುವುದು ಕಡ್ಡಾಯ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಜಿಲ್ಲಾಡಳಿತವು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಿದೆ. ಹೀಗಾಗಿ ವ್ರತನಿಷ್ಠ ಮುಸ್ಲಿಂ ಸಮುದಾಯದವರು ತಮ್ಮ ಮನೆಗಳಲ್ಲೇ ಪ್ರಾರ್ಥನೆ ಮಾಡುತ್ತಿದ್ದಾರೆ.

ಮುಸ್ಲಿಮರ ಮನ ಮತ್ತು ಮನೆಗಳು ಪ್ರಾರ್ಥನೆಯ ಮೌನದಲ್ಲಿ ಅಲ್ಲಾಹುನನ್ನು ನೆನೆಯುತ್ತಿವೆ. ದೊಡ್ಡವರಿಗೆ ಪ್ರಾರ್ಥನೆಯು ನಿಷ್ಠೆಯ ವಿಷಯ. ದೊಡ್ಡವರ ಮೌನ ಪ್ರಾರ್ಥನೆ ನಡುವೆ ಮಕ್ಕಳ ಬೆರಗು ಕಂಗಳ ಚಂಚಲ ನೋಟದ ಬೆಳಕು ಮನೆಯಂಗಳದಲ್ಲಿ ಹಾಸಿಕೊಂಡಿದೆ.

ರಂಜಾನ್‌ ಮಾಸ ಆರಂಭವಾಗಿ ಈಗಾಗಲೇ 29 ದಿನ ಕಳೆದಿದ್ದು, ಕುರಾನ್‌ ಪಠಣ ಅಂತ್ಯಗೊಂಡಿದೆ. ರಂಜಾನ್‌ ತಿಂಗಳಲ್ಲಿ ಮಕ್ಕಳಿಗೆ ಸಂಭ್ರಮವೋ ಸಂಭ್ರಮ. ಬೆಳಗಿನ ಜಾವದಲ್ಲೇ ನಿದ್ದೆಯಿಂದ ಎದ್ದು ಇಡೀ ಬಡಾವಣೆಯಲ್ಲಿ ಕೂಗುತ್ತಾ ಉಪವಾಸ ಇರುವವರನ್ನು ಎಚ್ಚರಗೊಳಿಸುತ್ತಾರೆ. ಈ ಮಾಸವೆಂದರೆ ಮುಸ್ಲಿಂ ಮಹಿಳೆಯರಿಗೆ ಉಪವಾಸ, ಪ್ರಾರ್ಥನೆ ಅಷ್ಟೇ ಅಲ್ಲದೆ ನಿತ್ಯ ವಿಶ್ರಾಂತಿ ಇಲ್ಲದ ದುಡಿಮೆ. ಅವರ ದಿನಚರಿ ಆರಂಭವಾಗುವುದು ಬೆಳಗಿನ ಜಾವ. ಮುಗಿಯುವುದು ಮಧ್ಯ ರಾತ್ರಿ. ಉಪವಾಸದ ಜತೆಗೆ ಸತತ ಕೆಲಸ. ಆದರೂ ಮಹಿಳೆಯರ ಭಕ್ತಿ ಕುಂದಿಲ್ಲ.

ಭಾವೈಕ್ಯದ ಪ್ರಭಾವಳಿ: ಪ್ರೀತಿ ಸಹೋದರತ್ವದ ಪ್ರತೀಕವಾದ ರಂಜಾನ್‌ ಹಬ್ಬವನ್ನು ಕುತುಬ್‌-ಎ ರಂಜಾನ್‌, ಈದ್‌ ಉಲ್‌ ಫಿತರ್‌ ಹೀಗೆ ಮೊದಲಾದ ಹೆಸರುಗಳಿಂದ ಕರೆಯಲಾಗುತ್ತದೆ. ರಂಜಾನ್‌ಗೆ ಭಾವೈಕ್ಯದ ಪ್ರಭಾವಳಿ ಉಂಟು. ಸಮಬಾಳು ಸಮಪಾಲಿನ ಅರ್ಥ ತಿಳಿಸುವ ಅಪೂರ್ವ ಹಬ್ಬವಾಗಿದೆ. ವೈಷಮ್ಯ, ವೈರತ್ವ ತೊಡೆದು ಹಾಕಿ ಸ್ನೇಹ ಮತ್ತು ಪ್ರೀತಿಯಿಂದ ಒಂದಾಗುವುದು ರಂಜಾನ್ ಮಾಸಾಚರಣೆಯ ಮುಖ್ಯ ಉದ್ದೇಶ. ಸಾಮೂಹಿಕ ನಮಾಜ್, ಉಪವಾಸದಷ್ಟೇ ನಿಷ್ಠೆಯಿಂದ ಸ್ನೇಹಿತರನ್ನು ಮತ್ತು ಬಂಧುಗಳನ್ನು ಸತ್ಕರಿಸಬೇಕು ಎಂಬುದು ಕೂಡಾ ಆ ಆಚರಣೆಯ ಮುಖ್ಯ ನಿಯಮ.

ರಂಜಾನ್​ ಸಮೋಸಕ್ಕೆ ಹೆಚ್ಚಿನ ಮಹತ್ವ: ಹಲವು ಮಸೀದಿಗಳ ಬಳಿ ಹಣ್ಣಿನ ಅಂಗಡಿ, ಸಿಹಿ ಖಾದ್ಯ ಮತ್ತು ಮಾಂಸಾಹಾರದ ಮಳಿಗೆಗಳು ತಲೆಯೆತ್ತಿವೆ. ಹಲೀಮ್‌, ಕಬಾಬ್‌, ತೀತರ್‌ ಘೋಷ್‌, ಫಿಶ್‌ ಫ್ರೈ, ಚಿಕನ್‌ ಕಬಾಬ್‌, ಫಾಲ್‌ ಗರಮಾ ಗರಂ ಮಾಂಸಾಹಾರ ಭಕ್ಷ್ಯಗಳ ಅಂಗಡಿಗಳು ಸಾಲುಸಾಲಾಗಿವೆ. ಸಿಹಿ ತಿನಿಸು ಮತ್ತು ಹರೀರಾಗಳು ಹಬ್ಬದ ಕಳೆ ಹೆಚ್ಚಿಸಿವೆ. ಉಪವಾಸ ವ್ರತನಿರತರು ಪ್ರಾರ್ಥನೆ ಬಳಿಕ ಸೇವಿಸುವ ಆಹಾರದಲ್ಲಿ ಸಮೋಸಕ್ಕೆ ಅಗ್ರಸ್ಥಾನ. ಹಣ್ಣು, ಸಮೋಸ, ಕಚೋರಿ, ಬಟಾಟೆ ವಡಾ, ಪಾವ್‌ಬಾಜಿ, ಬೋಂಡ, ಮೆಣಸಿನಕಾಯಿ ಬಜ್ಜಿ ಖರೀದಿಗೆ ಜನ ಅಂಗಡಿಗಳ ಮುಂದೆ ಸಂತೆಯಂತೆ ಸೇರಿರುತ್ತಾರೆ.

Published On - 10:31 am, Sun, 24 May 20

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ