ಸೇತುವೆ ಬಳಿ ಲಾರಿ ಡಿಕ್ಕಿಯಾಗಿ ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ದುರ್ಮರಣ

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಹಣಗವಾಡಿ ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ದುರಂತ ಸಾವಿಗೀಡಾಗಿದ್ದಾರೆ. ಹಣಗವಾಡಿ ಬಳಿಯ ತುಂಗಭದ್ರಾ ಸೇತುವೆ ಸಮೀಪ ಅಪಘಾತ ಸಂಭವಿಸಿದ್ದು,  ಒಡೆಯರರಾಯನಹಳ್ಳಿಯ ಸಿದ್ದಮ್ಮ(45) ಮತ್ತು ಹಾಲೇಶಪ್ಪ(52) ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಮೇಲಿದ್ದ ಸಿದ್ದಮ್ಮ ಸೇತುವೆ ಕೆಳಗೆ ಬಿದ್ದು ಸಾವಿಗೀಡಾಗಿದ್ದರೆ ತೀವ್ರ ಗಾಯಗೊಂಡ ಪತಿ ಹಾಲೇಶಪ್ಪ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ. ಮೃತರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಒಡೆಯರರಾಯನಹಳ್ಳಿ ಗ್ರಾಮದ ನಿವಾಸಿಗಳು. ಹರಿಹರ ಗ್ರಾಮಾಂತರ ಪೊಲೀಸ್ […]

ಸೇತುವೆ ಬಳಿ ಲಾರಿ ಡಿಕ್ಕಿಯಾಗಿ ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ದುರ್ಮರಣ
ಸಾಧು ಶ್ರೀನಾಥ್​

Updated on: Jan 01, 2021 | 3:37 PM

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಹಣಗವಾಡಿ ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ದುರಂತ ಸಾವಿಗೀಡಾಗಿದ್ದಾರೆ. ಹಣಗವಾಡಿ ಬಳಿಯ ತುಂಗಭದ್ರಾ ಸೇತುವೆ ಸಮೀಪ ಅಪಘಾತ ಸಂಭವಿಸಿದ್ದು,  ಒಡೆಯರರಾಯನಹಳ್ಳಿಯ ಸಿದ್ದಮ್ಮ(45) ಮತ್ತು ಹಾಲೇಶಪ್ಪ(52) ಮೃತಪಟ್ಟಿದ್ದಾರೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಮೇಲಿದ್ದ ಸಿದ್ದಮ್ಮ ಸೇತುವೆ ಕೆಳಗೆ ಬಿದ್ದು ಸಾವಿಗೀಡಾಗಿದ್ದರೆ ತೀವ್ರ ಗಾಯಗೊಂಡ ಪತಿ ಹಾಲೇಶಪ್ಪ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ. ಮೃತರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಒಡೆಯರರಾಯನಹಳ್ಳಿ ಗ್ರಾಮದ ನಿವಾಸಿಗಳು.
ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 3:36 pm, Fri, 1 January 21

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us