ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಎಂಬಿ ಅಯ್ಯನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಡಿಕ್ಕಿಯ ರಭಸಕ್ಕೆ ಲಾರಿ ಹೊತ್ತಿ ಉರಿದಿದೆ. ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಅಡಿಕೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಾಗ ಬೆಂಕಿ ಹೊತ್ತಿಕೊಂಡಿದ್ದು ಅಪಘಾತದಿಂದ ವಿಚಲಿತನಾದ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲಿಯೇ ಬಿಟ್ಟು ಕಾಲ್ಕಿತ್ತಿದ್ದಾನೆ. ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದು, ಕೆಲಕಾಲ ಸಂಚಾರಕ್ಕೆ ಅಡಚಣೆಯಾಗಿದೆ.
ಯಶವಂತಪುರ: ಆಟೋ-ಬೈಕ್ ನಡುವೆ ಅಪಘಾತ.. ದ್ವಿಚಕ್ರ ಸವಾರನಿಗೆ ಗಂಭೀರ ಗಾಯ