ಕುಡುಕ ಲಾರಿ ಚಾಲಕನ ಹಾವಳಿ: ಕೂದಲೆಳೆ ಅಂತರದಲ್ಲಿ ತಪ್ಪಿದ ‘ಆಕ್ಸಿಡೆಂಟ್’

|

Updated on: Aug 08, 2020 | 2:17 PM

ತುಮಕೂರು: ಅತಿಯಾದ ಮದ್ಯ ಸೇವಿಸಿ ಚಾಲಕನೊಬ್ಬ ಅಡ್ಡಾದಿಡ್ಡಿಯಾಗಿ ಲಾರಿ ಚಲಾಯಿಸಿದ ಪರಿಣಾಮದಿಂದಾಗಿ, ನಿಯಂತ್ರಣ ತಪ್ಪಿದ ಲಾರಿ ಟೋಲ್​ ಡಿವೈಡರ್​ಗೆ ಡಿಕ್ಕಿ ಹೊಡೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ದಾಸರಹಳ್ಳಿ ಟೋಲ್ ಬಳಿ ಈ ಘಟನೆ ಸಂಭವಿಸಿದ್ದು, ಚಾಲಕನೊಬ್ಬ ಅತಿಯಾಗಿ ಮದ್ಯ ಸೇವಿಸಿ ಲಾರಿ ಚಲಾಯಿಸಿದ್ದಾನೆ. ಇದರಿಂದ ನಿಯಂತ್ರಣ ತಪ್ಪಿದ ಲಾರಿ ವೇಗವಾಗಿ ಬಂದು ಟೋಲ್ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬರುತ್ತಿದ್ದ ಲಾರಿಯನ್ನು ಗಮನಿಸಿದ ಟೋಲ್​ ಸಿಬ್ಬಂದಿ ಅಲ್ಲಿಂದ ಓಡಿ ಜೀವ ಉಳಿಸಿಕೊಂಡಿದ್ದಾರೆ. […]

ಕುಡುಕ ಲಾರಿ ಚಾಲಕನ ಹಾವಳಿ: ಕೂದಲೆಳೆ ಅಂತರದಲ್ಲಿ ತಪ್ಪಿದ ‘ಆಕ್ಸಿಡೆಂಟ್’
Follow us on

ತುಮಕೂರು: ಅತಿಯಾದ ಮದ್ಯ ಸೇವಿಸಿ ಚಾಲಕನೊಬ್ಬ ಅಡ್ಡಾದಿಡ್ಡಿಯಾಗಿ ಲಾರಿ ಚಲಾಯಿಸಿದ ಪರಿಣಾಮದಿಂದಾಗಿ, ನಿಯಂತ್ರಣ ತಪ್ಪಿದ ಲಾರಿ ಟೋಲ್​ ಡಿವೈಡರ್​ಗೆ ಡಿಕ್ಕಿ ಹೊಡೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ದಾಸರಹಳ್ಳಿ ಟೋಲ್ ಬಳಿ ಈ ಘಟನೆ ಸಂಭವಿಸಿದ್ದು, ಚಾಲಕನೊಬ್ಬ ಅತಿಯಾಗಿ ಮದ್ಯ ಸೇವಿಸಿ ಲಾರಿ ಚಲಾಯಿಸಿದ್ದಾನೆ. ಇದರಿಂದ ನಿಯಂತ್ರಣ ತಪ್ಪಿದ ಲಾರಿ ವೇಗವಾಗಿ ಬಂದು ಟೋಲ್ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬರುತ್ತಿದ್ದ ಲಾರಿಯನ್ನು ಗಮನಿಸಿದ ಟೋಲ್​ ಸಿಬ್ಬಂದಿ ಅಲ್ಲಿಂದ ಓಡಿ ಜೀವ ಉಳಿಸಿಕೊಂಡಿದ್ದಾರೆ.

ಈ ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು ಆಧಾರವಾಗಿಟ್ಟುಕೊಂಡು ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 2:02 pm, Sat, 8 August 20