ಲಾರಿ ಡಿಕ್ಕಿ: ಕಾರಿನಲ್ಲಿದ್ದ ಬೆಂಗಳೂರಿನ ಯುವಕ ದುರ್ಮರಣ, ಮೂವರು ಆಸ್ಪತ್ರೆಗೆ ದಾಖಲು
ಲಾರಿ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿ ರಾ.ಹೆ. 4ರಲ್ಲಿ ನಡೆದಿದೆ.
ನೆಲಮಂಗಲ: ಲಾರಿ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿ ರಾ.ಹೆ. 4ರಲ್ಲಿ ನಡೆದಿದೆ. ಬೆಂಗಳೂರಿನ ದೀಕ್ಷಿತ್ ಕುಮಾರ್(26) ಮೃತ ದುರ್ದೈವಿ.
ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು ಅದೃಷ್ಟವಶಾತ್ ಉಳಿಕ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ನಾಗರ್ಜುನ, ರವಿ, ವಿನೋದ್ಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬೆಂಗಳೂರಿನ 8ನೇ ಮೈಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ಬಳಿಕ ಲಾರಿ ಸಮೇತ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.