ಶಿವಗಂಗಾ ಬಳಿ ಲಾರಿ, ಕಾರುಗಳ ಮಧ್ಯೆ ಸರಣಿ ಅಪಘಾತ: ಒಬ್ಬರ ಸಾವು
ಚಿತ್ರದುರ್ಗ: ಶಿವಗಂಗಾ ಬಳಿ ಲಾರಿ ಹಾಗೂ 2 ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಶಂಭು (60) ಎಂಬುವವರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿದೆ. ನಾಲ್ವರು ಗಾಯಾಳುಗಳು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಿತ್ರದುರ್ಗ: ಶಿವಗಂಗಾ ಬಳಿ ಲಾರಿ ಹಾಗೂ 2 ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಶಂಭು (60) ಎಂಬುವವರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿದೆ.
ನಾಲ್ವರು ಗಾಯಾಳುಗಳು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




