AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನಲ್ಲಿ ಲವ್ ಆಗಿ, ಪೊಲೀಸ್ ಠಾಣೆ ಬಳಿ ಮದುವೆಯಾದ್ರು

ಹಾವೇರಿ: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ ಪ್ರೀತಿ ಪ್ರೇಮ ಪ್ರಣಯ ಎಂದು ಸುತ್ತಾಡಿದ್ದ ಜೋಡಿಯೊಂದು ಪೊಲೀಸ್ ಠಾಣೆ ಮೆಟ್ಟಿಲೇರಿ ಲಾಕ್​ಡೌನ್ ಸಮಯದಲ್ಲಿ ಸರಳ ಮದುವೆಯಾದ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದ ಯುವಕ ಹಾಗೂ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಯುವತಿ ಫೇಸ್​ಬುಕ್, ವಾಟ್ಸಪ್ ಮೂಲಕ ಪರಸ್ಪರ ಪರಿಚಯವಾಗಿದ್ದರು. ಪರಿಚಯ ಸ್ನೇಹ, ಪ್ರೀತಿಗೆ ತಿರುಗಿತ್ತು. ಇಬ್ಬರ ನಡುವೆ ಪ್ರೀತಿ, ಪ್ರೇಮ, ಪ್ರಣಯ ಎಂದೆಲ್ಲ ನಡೆದು ಇಬ್ಬರೂ ಬೆಂಗಳೂರಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ […]

ಫೇಸ್​ಬುಕ್​ನಲ್ಲಿ ಲವ್ ಆಗಿ, ಪೊಲೀಸ್ ಠಾಣೆ ಬಳಿ ಮದುವೆಯಾದ್ರು
ಆಯೇಷಾ ಬಾನು
|

Updated on:May 31, 2020 | 2:29 PM

Share

ಹಾವೇರಿ: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ ಪ್ರೀತಿ ಪ್ರೇಮ ಪ್ರಣಯ ಎಂದು ಸುತ್ತಾಡಿದ್ದ ಜೋಡಿಯೊಂದು ಪೊಲೀಸ್ ಠಾಣೆ ಮೆಟ್ಟಿಲೇರಿ ಲಾಕ್​ಡೌನ್ ಸಮಯದಲ್ಲಿ ಸರಳ ಮದುವೆಯಾದ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದ ಯುವಕ ಹಾಗೂ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಯುವತಿ ಫೇಸ್​ಬುಕ್, ವಾಟ್ಸಪ್ ಮೂಲಕ ಪರಸ್ಪರ ಪರಿಚಯವಾಗಿದ್ದರು. ಪರಿಚಯ ಸ್ನೇಹ, ಪ್ರೀತಿಗೆ ತಿರುಗಿತ್ತು. ಇಬ್ಬರ ನಡುವೆ ಪ್ರೀತಿ, ಪ್ರೇಮ, ಪ್ರಣಯ ಎಂದೆಲ್ಲ ನಡೆದು ಇಬ್ಬರೂ ಬೆಂಗಳೂರಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು.

ಪ್ರೀತಿಸಿದವನ ಮನೆ ಹುಡುಕಿಕೊಂಡು ಬಂದಳು ಪ್ರೇಯಸಿ: ಅದ್ಯಾಕೋ ಏನೋ ಇತ್ತೀಚೆಗೆ ಯುವಕ ತಾನು ಪ್ರೀತಿಸುತ್ತಿದ್ದ ಯುವತಿಯನ್ನು ದೂರ ಮಾಡಿದ್ದ. ಕಳೆದ ಐದಾರು ತಿಂಗಳಿನಿಂದ ಮೊಬೈಲ್ ಸ್ವಿಚ್ಡ್ ಆಪ್ ಮಾಡಿಕೊಂಡು ಆಕೆಯ ಕೈಗೆ ಸಿಗದಂತಾದ. ತಾನು ಪ್ರೀತಿಸುತ್ತಿದ್ದ ಯುವಕನ ಮನೆ ಹುಡುಕಿಕೊಂಡು ಬಂದ ಯುವತಿ ನಡೆದ ಸಂಗತಿಯನ್ನು ಯುವಕನ ಮನೆಯವರಿಗೆ ತಿಳಿಸಿದ್ದಾಳೆ.

ಯುವಕನೊಂದಿಗೆ ಮದುವೆ ಮಾಡಿಸುವಂತೆ ಒತ್ತಾಯಿಸಿದ್ದಾಳೆ. ಆಗ ಯುವಕನ ಮನೆಯವರು ಯುವತಿಗೆ ತಮ್ಮ ಮನೆಯವರನ್ನು ಕರೆದುಕೊಂಡು ಬರುವಂತೆ ತಿಳಿಸಿದ್ದಾರೆ. ಯುವತಿ ತನ್ನ ಮನೆಯವರನ್ನು ಕರೆದುಕೊಂಡು ಬಂದು ತಾನು ಪ್ರೀತಿಸುತ್ತಿದ್ದ ಯುವಕನ ಜೊತೆ ಮದುವೆ ಮಾಡುವಂತೆ ಕೇಳಿದ್ದಾಳೆ. ಆಗ ಯುವಕನ ಮನೆಯವರು ಒಪ್ಪದಿದ್ದಾಗ ಪ್ರಕರಣ ಬಂಕಾಪುರ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.

ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ ಮದುವೆಯಾಗುವ ಭರವಸೆ ನೀಡಿದ್ದ ಯುವಕ ತನ್ನನ್ನು ಮದುವೆ ಮಾಡಿಕೊಳ್ಳದಿದ್ದರೆ ಪ್ರಕರಣ ದಾಖಲಿಸುವುದಾಗಿ ಪಟ್ಟು ಹಿಡಿದಿದ್ದಳು. ನಂತರ ಸುಮ್ಮನೆ ಕೇಸು ಅಂತ ಅಲೆಯೋದು ಬೇಡ ಎಂದು ಕುಟುಂಬದವರ ಸಮ್ಮುಖದಲ್ಲಿ ಪೊಲೀಸ್ ಠಾಣೆ ಬಳಿ ಯುವಕ ಯುವತಿಯನ್ನು ಮದುವೆಯಾಗಿದ್ದಾನೆ. ಲಾಕ್​ಡೌನ್ ಇರುವುದರಿಂದ ಕುಟುಂಬಸ್ಥರು ಪೊಲೀಸ್ ಠಾಣೆ ಬಳಿಯೇ ಸರಳವಾಗಿ ಇಬ್ಬರಿಗೂ ಪರಸ್ಪರ ಹಾರ ಬದಲಾಯಿಸಿ, ಮದುವೆ ಮಾಡಿಸಿದ್ದಾರೆ. ಆ ಮೂಲಕ ಸಾಮಾಜಿಕ ಜಾಲತಾಣದ ಮೂಲಕ ಆರಂಭವಾದ ಪ್ರೇಮ ಪ್ರಕರಣ ಸುಖಾಂತ್ಯ ಕಾಣುವಂತೆ ಮಾಡಿದ್ದಾರೆ.

Published On - 12:54 pm, Sun, 31 May 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು