ಮುನೇಶ್ವರ ಬ್ಲಾಕ್ನಲ್ಲಿ ಅಡುಗೆ ಸಿಲಿಂಡರ್ ಸ್ಫೋಟ
ಬೆಂಗಳೂರು: ಅಡುಗೆ ಅನಿಲದ ಸಿಲಿಂಡರ್ ಸ್ಫೋಟದಿಂದ ಮನೆಗೆ ಹಾನಿಯಾಗಿರುವ ಘಟನೆ ನಗರದ ಉಲ್ಲಾಳ ಬಳಿಯಿರುವ ಮುನೇಶ್ವರ ಬ್ಲಾಕ್ನಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಹೇಳಲಾಗಿದೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಛಿದ್ರವಾಗಿದೆ. ಅದೃಷ್ಟವಶಾತ್, ಯಾವುದೇ ಸಾವು ನೋವು ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು: ಅಡುಗೆ ಅನಿಲದ ಸಿಲಿಂಡರ್ ಸ್ಫೋಟದಿಂದ ಮನೆಗೆ ಹಾನಿಯಾಗಿರುವ ಘಟನೆ ನಗರದ ಉಲ್ಲಾಳ ಬಳಿಯಿರುವ ಮುನೇಶ್ವರ ಬ್ಲಾಕ್ನಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಹೇಳಲಾಗಿದೆ.
ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಛಿದ್ರವಾಗಿದೆ. ಅದೃಷ್ಟವಶಾತ್, ಯಾವುದೇ ಸಾವು ನೋವು ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Published On - 2:18 pm, Tue, 27 October 20