ವಿಜಯಪುರ: ನಿಶ್ಚಿತಾರ್ಥವಾಗಿದ್ದ ಎಂಕಾಂ ವಿದ್ಯಾರ್ಥಿನಿ ನೇಣಿಗೆ ಶರಣು
ವಿಜಯಪುರ: ಸ್ನಾತಕೋತ್ತರ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಎಂಕಾಂ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ವಿಜಯಪುರ ನಗರದ ಹೊರ ಭಾಗದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಈ ಘಟನೆ ಸಂಭವಿಸಿದ್ದು, ಕಲಬುರಗಿ ಮೂಲದ ಐಶ್ವರ್ಯ (23) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಐಶ್ವರ್ಯ ಎಂಕಾಂ ಕೊನೆಯ ಸೆಮಿಸ್ಟರ್ ಪರೀಕ್ಷೆ ಬರೆಯಲು ಬಂದಿದ್ದಳು. ಆದರೆ ಸ್ನಾತಕೋತ್ತರ ವಿದ್ಯಾರ್ಥಿಯರ ವಸತಿ ನಿಲಯದಲ್ಲಿ ನೇಣಿಗೆ ಶರಣಾಗಿದ್ದಾಳೆ. ಇತ್ತಿಚೆಗಷ್ಟೇ ಐಶ್ವರ್ಯಾಳ ನಿಶ್ಚಿತಾರ್ಥವಾಗಿತ್ತು ಎಂಬುದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ […]

ವಿಜಯಪುರ: ಸ್ನಾತಕೋತ್ತರ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಎಂಕಾಂ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ವಿಜಯಪುರ ನಗರದ ಹೊರ ಭಾಗದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಈ ಘಟನೆ ಸಂಭವಿಸಿದ್ದು, ಕಲಬುರಗಿ ಮೂಲದ ಐಶ್ವರ್ಯ (23) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಐಶ್ವರ್ಯ ಎಂಕಾಂ ಕೊನೆಯ ಸೆಮಿಸ್ಟರ್ ಪರೀಕ್ಷೆ ಬರೆಯಲು ಬಂದಿದ್ದಳು. ಆದರೆ ಸ್ನಾತಕೋತ್ತರ ವಿದ್ಯಾರ್ಥಿಯರ ವಸತಿ ನಿಲಯದಲ್ಲಿ ನೇಣಿಗೆ ಶರಣಾಗಿದ್ದಾಳೆ.
ಇತ್ತಿಚೆಗಷ್ಟೇ ಐಶ್ವರ್ಯಾಳ ನಿಶ್ಚಿತಾರ್ಥವಾಗಿತ್ತು ಎಂಬುದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿಜಯಪುರ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.