ವಿಜಯಪುರ: ನಿಶ್ಚಿತಾರ್ಥವಾಗಿದ್ದ ಎಂಕಾಂ ವಿದ್ಯಾರ್ಥಿನಿ ನೇಣಿಗೆ ಶರಣು

ವಿಜಯಪುರ: ಸ್ನಾತಕೋತ್ತರ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಎಂಕಾಂ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ವಿಜಯಪುರ ‌ನಗರದ ಹೊರ ಭಾಗದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಈ ಘಟನೆ ಸಂಭವಿಸಿದ್ದು, ಕಲಬುರಗಿ ಮೂಲದ ಐಶ್ವರ್ಯ (23) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಐಶ್ವರ್ಯ ಎಂಕಾಂ ಕೊನೆಯ ಸೆಮಿಸ್ಟರ್ ಪರೀಕ್ಷೆ ಬರೆಯಲು ಬಂದಿದ್ದಳು. ಆದರೆ ಸ್ನಾತಕೋತ್ತರ ವಿದ್ಯಾರ್ಥಿಯರ ವಸತಿ ನಿಲಯದಲ್ಲಿ ನೇಣಿಗೆ ಶರಣಾಗಿದ್ದಾಳೆ. ಇತ್ತಿಚೆಗಷ್ಟೇ ಐಶ್ವರ್ಯಾಳ ನಿಶ್ಚಿತಾರ್ಥವಾಗಿತ್ತು ಎಂಬುದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ […]

ವಿಜಯಪುರ: ನಿಶ್ಚಿತಾರ್ಥವಾಗಿದ್ದ ಎಂಕಾಂ ವಿದ್ಯಾರ್ಥಿನಿ ನೇಣಿಗೆ ಶರಣು
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Sep 20, 2020 | 4:36 PM

ವಿಜಯಪುರ: ಸ್ನಾತಕೋತ್ತರ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಎಂಕಾಂ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ವಿಜಯಪುರ ‌ನಗರದ ಹೊರ ಭಾಗದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಈ ಘಟನೆ ಸಂಭವಿಸಿದ್ದು, ಕಲಬುರಗಿ ಮೂಲದ ಐಶ್ವರ್ಯ (23) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಐಶ್ವರ್ಯ ಎಂಕಾಂ ಕೊನೆಯ ಸೆಮಿಸ್ಟರ್ ಪರೀಕ್ಷೆ ಬರೆಯಲು ಬಂದಿದ್ದಳು. ಆದರೆ ಸ್ನಾತಕೋತ್ತರ ವಿದ್ಯಾರ್ಥಿಯರ ವಸತಿ ನಿಲಯದಲ್ಲಿ ನೇಣಿಗೆ ಶರಣಾಗಿದ್ದಾಳೆ.

ಇತ್ತಿಚೆಗಷ್ಟೇ ಐಶ್ವರ್ಯಾಳ ನಿಶ್ಚಿತಾರ್ಥವಾಗಿತ್ತು ಎಂಬುದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿಜಯಪುರ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us