ಮೈಸೂರು: ಮೋದಿ ಬಂದ ಬಳಿಕ 800 ದೇಶದ್ರೋಹದ ಪ್ರಕರಣಗಳು ಹುಟ್ಟಿಕೊಂಡಿವೆ ಎಂದು ಹೇಳಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ದಿಶಾರನ್ನು ದೆಹಲಿ ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ. ಸರ್ಕಾರದ ವಿರುದ್ಧ ಮಾತಾನಾಡುವವರೆಲ್ಲಾ ದೇಶದ್ರೋಹಿಗಳಾ? ಎಂದು ಪ್ರಶ್ನಿಸಿ ಇದಕ್ಕೆ ಮತ್ತೊಂದು ಉದಾಹರಣೆ ದಿಶಾ ರವಿ ಬಂಧನ ಎಂದರು. ದಿಶಾರನ್ನು ಬೆಂಗಳೂರು ಪೊಲೀಸರ ಅನುಮತಿ ಪಡೆಯದೆ ದೆಹಲಿ ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ. ರೈತರಿಗೆ ಬೆಂಬಲ ಸೂಚಿಸಿದ್ದೆ ಇವರಿಗೆ ತೊಂದರೆಯಾಗಿದೆ. ಟೂಲ್ ಕಿಟ್ ಎಂಬ ಹೊಸ ಪದ ಬಳಕೆ ಮಾಡಿ ಜನರಲ್ಲಿ ಗೊಂದಲ ಸೃಷ್ಟಿಸಿ ಹೆಣ್ಣು ಮಗಳನ್ನ ಬಂಧಿಸಿದ್ದಾರೆ. ಬಿಜೆಪಿಗೆ ಹೆಣ್ಣು ಮಕ್ಕಳ ಮೇಲೆ ಗೌರವ ಇಲ್ಲ ಎಂದು ಹೇಳಿದರು.
ದಿಶಾ ರವಿ ರೈತ ಕುಟುಂಬದಿಂದ ಬಂದವರು. ರೈತರ ಬೆಂಬಲ ಸೂಚಿಸಿದ್ದೆ ಇವರಿಗೆ ತೊಂದರೆಯಾಗಿದೆ. ಆ ಕಾರಣಕ್ಕಾಗಿ ಇವರನ್ನ ಬಂಧಿಸಿದ್ದಾರೆ. ಯುವಕ, ಯುವತಿಯರು ಬಿಜೆಪಿ ವಿರುದ್ದ ಧ್ವನಿ ಎತ್ತಬೇಕು. ಮೊದಲು ಬಿಜೆಪಿಯವರ ಐಟಿ ಸೆಲ್, ಅರ್ಎಸ್ಎಸ್ನ ಬ್ಯಾನ್ ಮಾಡಿ ಎಂದು ಹೇಳಿದರು.
ಕಾರ್ಯಪ್ಪ ವಿರುದ್ಧ ವಾಗ್ದಾಳಿ
ಉಚಿತ ನಾಟಕ ತೋರಿಸುವುದು ಸಿದ್ದರಾಮಯ್ಯ ಉಚಿತ ಅಕ್ಕಿ ಕೊಟ್ಟಂತೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಎಂ.ಲಕ್ಷ್ಮಣ ಬಿಜೆಪಿಯವರು ಬಡವರು ತಿನ್ನುವ ಅನ್ನಕ್ಕೂ ಕೇಸರಿ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ. ನೀವು ಅಕ್ಕಿ ಬೆಳೆಯುವವರನ್ನು ಸಹಿಸಲ್ಲ ಉಚಿತ ಅಕ್ಕಿ ಕೊಡುವವರನ್ನು ಸಹಿಸಲ್ಲ. ಕಾರ್ಯಪ್ಪ ನಿಮ್ಮ ವ್ಯಾಪ್ತಿಯಲ್ಲಿ ಏನಿದೆ ಅದನ್ನು ಮಾತ್ರ ಮಾಡಿ. ಮೈಸೂರಿನಲ್ಲಿ ನಿಮ್ಮ ಅಡ್ಡಕಸವಿತನ ತೋರಬೇಡಿ. ಸಿದ್ದರಾಮಯ್ಯ ತಂದ ಅನ್ನಭಾಗ್ಯ ಯೋಜನೆಯಿಂದ ಒಂದುವರೆ ಕೋಟಿ ಜನ ಹೊಟ್ಟೆ ತುಂಬಿಸಿಕೊಂಡಿದ್ದಾರೆ. ಆದರೆ ಮೋದಿ ಮಾಡಿದ ಲಾಕ್ಡೌನ್ ಸಂದರ್ಭದಲ್ಲಿ ಹಸಿವಿನಿಂದ ಸಾವಿರಾರು ಜನ ಸಾವನ್ನಪ್ಪಿದ್ದಾರೆ. ಬಡವರ ಬಗ್ಗೆ ಟೀಕಿಸಿ ಸಂತೋಷ ಪಡುವ ಕೊಳಕು ಮನಸ್ಥಿತಿ ನಿಮ್ಮದು ಎಂದು ಅಡ್ಡಂಡ ಕಾರ್ಯಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿಯವರು ಯಾರಾದರು ಟಿವಿ ಇಲ್ಲದವರ ಮನೆ ತೋರಿಸಿ. ಈ ಕಾನೂನು ತಂದರೆ ಯಾವೊಬ್ಬನಿಗೂ ಬಿಪಿಎಲ್ ಕಾರ್ಡ್ ಇರಲ್ಲ. ಈ ಹಿಂದೆ ನಮ್ಮ ಸರ್ಕಾರದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದಾಗ ರ್ಎಸ್ಎಸ್ನವರು ಜನರನ್ನು ಬೀದಿಗಿಳಿಸಿದ್ದರು. ಈಗ ಇಷ್ಟೆಲ್ಲ ಸಮಸ್ಯೆಯಿಂದ ಜನ ಹೊಡೆಸಿಕೊಳ್ಳುತ್ತಿದ್ದರು ಯಾರು ಸಹ ಮಾತನಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಜನ ಈ ವಿಚಾರವಾಗಿ ಎಚ್ಚರಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ: ಕರ್ನಾಟಕದಲ್ಲಿ 20ರಂದು ‘ಹಳ್ಳಿ ಕಡೆ ನಡೆಯಿರಿ’ ಕಾರ್ಯಕ್ರಮ; ಹಳ್ಳಿಗಳಿಗೆ ಡಿಸಿ, ಎಸಿ, ತಹಶೀಲ್ದಾರ್ ಭೇಟಿ: ಆರ್.ಅಶೋಕ ಘೋಷಣೆ