ಮಡಿಕೇರಿ: ಕೊರೊನಾ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾವನ್ನು ಮೈಸೂರಿನಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಇದರ ಜೊತೆಗೆ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಕೂಡ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಸುಮಾರು 400, 500ಗಳ ಇತಿಹಾಸವಿರುವ ಮಡಿಕೇರಿ ದಸರಾ ಈ ಬಾರಿ ಧಾರ್ಮಿಕ ಆಚರಣೆಗಷ್ಟೇ ಸೀಮಿತವಾಗಿದೆ.
ಕೊರೊನಾ ಹಿನ್ನೆಲೆ ದಶಮಂಟಪಗಳ ಶೋಭಾಯಾತ್ರೆ ರದ್ದು ಮಾಡಲಾಗಿದ್ದು ಈ ಬಾರಿ ಕರಗ, ಕಳಶ ಮೆರವಣಿಗೆ ಮಾತ್ರ ನಡೆಯಲಿದೆ. ಮೆರವಣಿಗೆಯಲ್ಲಿ ದೇವಾಲಯ ಸಮಿತಿಯವರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದ್ದು, ಸ್ಥಳೀಯರು, ಪ್ರವಾಸಿಗರಿಗೆ ಅವಕಾಶವಿರುವುದಿಲ್ಲ. ಮಡಿಕೇರಿ ದಸರಾ ಹಿನ್ನೆಲೆಯಲ್ಲಿ ಮಡಿಕೇರಿ ಪ್ರವಾಸಿ ತಾಣಗಳಿಗೆ ಇಂದು ಪ್ರವೇಶ ನಿರ್ಬಂಧಿಸಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ನೀಡಿದ್ದಾರೆ.