ಸರಳ ಮಡಿಕೇರಿ ದಸರಾ: ಪ್ರವಾಸಿ ತಾಣಗಳಿಗೆ ಇಂದು ಪ್ರವೇಶ ನಿರ್ಬಂಧ

ಮಡಿಕೇರಿ: ಕೊರೊನಾ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾವನ್ನು ಮೈಸೂರಿನಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಇದರ ಜೊತೆಗೆ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಕೂಡ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಸುಮಾರು 400, 500ಗಳ ಇತಿಹಾಸವಿರುವ ಮಡಿಕೇರಿ ದಸರಾ ಈ ಬಾರಿ ಧಾರ್ಮಿಕ ಆಚರಣೆಗಷ್ಟೇ ಸೀಮಿತವಾಗಿದೆ. ಕೊರೊನಾ ಹಿನ್ನೆಲೆ ದಶಮಂಟಪಗಳ ಶೋಭಾಯಾತ್ರೆ ರದ್ದು ಮಾಡಲಾಗಿದ್ದು ಈ ಬಾರಿ ಕರಗ, ಕಳಶ ಮೆರವಣಿಗೆ ಮಾತ್ರ ನಡೆಯಲಿದೆ. ಮೆರವಣಿಗೆಯಲ್ಲಿ ದೇವಾಲಯ ಸಮಿತಿಯವರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದ್ದು, ಸ್ಥಳೀಯರು, ಪ್ರವಾಸಿಗರಿಗೆ ಅವಕಾಶವಿರುವುದಿಲ್ಲ. ಮಡಿಕೇರಿ ದಸರಾ ಹಿನ್ನೆಲೆಯಲ್ಲಿ ಮಡಿಕೇರಿ […]

ಸರಳ ಮಡಿಕೇರಿ ದಸರಾ: ಪ್ರವಾಸಿ ತಾಣಗಳಿಗೆ ಇಂದು ಪ್ರವೇಶ ನಿರ್ಬಂಧ
ಆಯೇಷಾ ಬಾನು

Updated on: Oct 26, 2020 | 8:58 AM

ಮಡಿಕೇರಿ: ಕೊರೊನಾ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾವನ್ನು ಮೈಸೂರಿನಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಇದರ ಜೊತೆಗೆ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಕೂಡ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಸುಮಾರು 400, 500ಗಳ ಇತಿಹಾಸವಿರುವ ಮಡಿಕೇರಿ ದಸರಾ ಈ ಬಾರಿ ಧಾರ್ಮಿಕ ಆಚರಣೆಗಷ್ಟೇ ಸೀಮಿತವಾಗಿದೆ.

ಕೊರೊನಾ ಹಿನ್ನೆಲೆ ದಶಮಂಟಪಗಳ ಶೋಭಾಯಾತ್ರೆ ರದ್ದು ಮಾಡಲಾಗಿದ್ದು ಈ ಬಾರಿ ಕರಗ, ಕಳಶ ಮೆರವಣಿಗೆ ಮಾತ್ರ ನಡೆಯಲಿದೆ. ಮೆರವಣಿಗೆಯಲ್ಲಿ ದೇವಾಲಯ ಸಮಿತಿಯವರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದ್ದು, ಸ್ಥಳೀಯರು, ಪ್ರವಾಸಿಗರಿಗೆ ಅವಕಾಶವಿರುವುದಿಲ್ಲ. ಮಡಿಕೇರಿ ದಸರಾ ಹಿನ್ನೆಲೆಯಲ್ಲಿ ಮಡಿಕೇರಿ ಪ್ರವಾಸಿ ತಾಣಗಳಿಗೆ ಇಂದು ಪ್ರವೇಶ ನಿರ್ಬಂಧಿಸಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ‌ ಅನೀಸ್ ಕಣ್ಮಣಿ ಜಾಯ್ ಆದೇಶ ನೀಡಿದ್ದಾರೆ.

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us