ಕಾಂಗ್ರೆಸ್ ಅಭ್ಯರ್ಥಿಯಾಗ್ತಾರಾ ಮಾಗಡಿ ಬಾಲಕೃಷ್ಣ?
ಬೆಂಗಳೂರು: ನವೆಂಬರ್ 3ರಂದು ರಾಜರಾಜೇಶ್ವರಿನಗರ ಉಪ ಚುನಾವಣೆ ಹಿನ್ನೆಲೆಯಲ್ಲಿ ತಯಾರಿ ಗರಿಗೆದರಿದೆ. ಸದ್ಯ ಈಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಗಡಿ ಬಾಲಕೃಷ್ಣ ಹೆಸರು ಚರ್ಚೆಯಾಗುತ್ತಿದೆ. ಅಭ್ಯರ್ಥಿ ಆಯ್ಕೆಗೆ ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಬಹುತೇಕ ಮಾಗಡಿ ಬಾಲಕೃಷ್ಣ ಅಭ್ಯರ್ಥಿ.. ಈ ಸಭೆಯಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಚಲುವರಾಯಸ್ವಾಮಿ ಭಾಗಿಯಾಗಿದ್ದಾರೆ. ಮಾಗಡಿ ಬಾಲಕೃಷ್ಣ ಜೊತೆ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಸಂಸದ ಡಿ.ಕೆ.ಸುರೇಶ್ಗೆ ಕರೆ ಮಾಡಿ ಸಭೆಗೆ ಬರಲು ಸೂಚನೆ ನೀಡಲಾಗಿದೆ. ಹೀಗಾಗಿ ಹಿರಿಯ […]

ಬೆಂಗಳೂರು: ನವೆಂಬರ್ 3ರಂದು ರಾಜರಾಜೇಶ್ವರಿನಗರ ಉಪ ಚುನಾವಣೆ ಹಿನ್ನೆಲೆಯಲ್ಲಿ ತಯಾರಿ ಗರಿಗೆದರಿದೆ. ಸದ್ಯ ಈಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಗಡಿ ಬಾಲಕೃಷ್ಣ ಹೆಸರು ಚರ್ಚೆಯಾಗುತ್ತಿದೆ. ಅಭ್ಯರ್ಥಿ ಆಯ್ಕೆಗೆ ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.
ಬಹುತೇಕ ಮಾಗಡಿ ಬಾಲಕೃಷ್ಣ ಅಭ್ಯರ್ಥಿ.. ಈ ಸಭೆಯಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಚಲುವರಾಯಸ್ವಾಮಿ ಭಾಗಿಯಾಗಿದ್ದಾರೆ. ಮಾಗಡಿ ಬಾಲಕೃಷ್ಣ ಜೊತೆ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಸಂಸದ ಡಿ.ಕೆ.ಸುರೇಶ್ಗೆ ಕರೆ ಮಾಡಿ ಸಭೆಗೆ ಬರಲು ಸೂಚನೆ ನೀಡಲಾಗಿದೆ. ಹೀಗಾಗಿ ಹಿರಿಯ ನಾಯಕರ ಸಭೆ ಕುತೂಹಲ ಕೆರಳಿಸಿದೆ. ಬಹುತೇಕ ಮಾಗಡಿ ಬಾಲಕೃಷ್ಣ ಅಭ್ಯರ್ಥಿಯಾಗುವ ಸಾಧ್ಯತೆ ಕಂಡು ಬರುತ್ತಿದೆ.




