ಭಾರೀ ಮಳೆಗೆ ಬೆಳಗಾವಿ ಜಿಲ್ಲೆಯ ಬಹುತೇಕ ಸೇತುವೆಗಳು ಜಲಾವೃತ

|

Updated on: Aug 16, 2020 | 1:24 PM

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯಾದ್ಯಂತ ಹಳ್ಳ, ಕೊಳ್ಳ ನದಿಗಳು ಆಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಬೆಳಗಾವಿ ಜಿಲ್ಲೆ ಈಗ ಮಹಾ ಮಳೆಗೆ ನಡುಗುತ್ತಿದೆ. ಸತತ ಮಳೆಯಿಂದಾಗಿ ಜಿಲ್ಲೆಯಲ್ಲಿ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಖಾನಾಪುರ ತಾಲೂಕಿನ ಹತ್ತಕ್ಕೂ ಅಧಿಕ ಸೇತುವೆಗಳು ಈಗ ಹರಿಯುವ ನದಿ ನೀರಲ್ಲಿ ಮುಳುಗಡೆಯಾಗಿವೆ. ಜಿಲ್ಲೆಯ ಪಾರಿಶ್ವಾಡ, ಹಿರೇಮುನವಳ್ಳಿ, ಚಾಪಗಾಂವ, ಕಾಮಸಿನಕೊಪ್ಪ ಗ್ರಾಮಗಳಿಗೆ ಸಂಪರ್ಕಿಸುವ ಸೇತುವೆಗಳು ಸಂಪೂರ್ಣ ಜಲಾವೃತವಾಗಿವೆ. […]

ಭಾರೀ ಮಳೆಗೆ ಬೆಳಗಾವಿ ಜಿಲ್ಲೆಯ ಬಹುತೇಕ ಸೇತುವೆಗಳು ಜಲಾವೃತ
Follow us on

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯಾದ್ಯಂತ ಹಳ್ಳ, ಕೊಳ್ಳ ನದಿಗಳು ಆಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಬೆಳಗಾವಿ ಜಿಲ್ಲೆ ಈಗ ಮಹಾ ಮಳೆಗೆ ನಡುಗುತ್ತಿದೆ. ಸತತ ಮಳೆಯಿಂದಾಗಿ ಜಿಲ್ಲೆಯಲ್ಲಿ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಖಾನಾಪುರ ತಾಲೂಕಿನ ಹತ್ತಕ್ಕೂ ಅಧಿಕ ಸೇತುವೆಗಳು ಈಗ ಹರಿಯುವ ನದಿ ನೀರಲ್ಲಿ ಮುಳುಗಡೆಯಾಗಿವೆ.

ಜಿಲ್ಲೆಯ ಪಾರಿಶ್ವಾಡ, ಹಿರೇಮುನವಳ್ಳಿ, ಚಾಪಗಾಂವ, ಕಾಮಸಿನಕೊಪ್ಪ ಗ್ರಾಮಗಳಿಗೆ ಸಂಪರ್ಕಿಸುವ ಸೇತುವೆಗಳು ಸಂಪೂರ್ಣ ಜಲಾವೃತವಾಗಿವೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ನೀಡಿದೆ.

Published On - 1:23 pm, Sun, 16 August 20