ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನ ಭಕ್ತರ ದರ್ಶನಕ್ಕೆ ಮುಕ್ತ
ಚಾಮರಾಜನಗರ: ಕೊವಿಡ್-19 ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಜಿಲ್ಲೆಯ ಹನೂರು ತಾಲೂಕಿನ ಸುಪ್ರಸಿದ್ಧ ಮಲೆ ಮಹದೇಶ್ವರ ಸ್ವಾಮಿ ದೇವಾಲಯವು ಇಂದು ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಕೊರೊನಾದಿಂದ ಮಲೆ ಮಹದೇಶ್ಚರ ಬೆಟ್ಟದಲ್ಲಿ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ದೇವಾಲಯದ ಎಲ್ಲ ಸೇವೆಗಳನ್ನು ಪುನರ್ ಆರಂಭಿಸಲಾಗಿದ್ದು ಈ ಕುರಿತು ಜಿಲ್ಲಾಧಿಕಾರಿ ಎಂ.ಆರ್.ರವಿ ಆದೇಶ ಸಹ ಹೊರಡಿಸಿದ್ದಾರೆ. ದೇವಸ್ಥಾನದಲ್ಲಿ ಅನ್ನ ದಾಸೋಹ ಮತ್ತು ಜಾತ್ರೆಗಳು ಆರಂಭವಾಗಲಿದೆ. ಜೊತೆಗೆ, ಇಂದಿನಿಂದಲೇ ಬೆಳಗ್ಗೆ 4ಗಂಟೆಯ ಅಭಿಷೇಕ, ಸಂಜೆ 7ಗಂಟೆಯ ಅಭಿಷೇಕ ಹಾಗೂ ಎಲ್ಲಾ ಪೂಜಾ ಕೈಂಕರ್ಯಗಳು ಮತ್ತು ಇತರೆ […]

ಚಾಮರಾಜನಗರ: ಕೊವಿಡ್-19 ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಜಿಲ್ಲೆಯ ಹನೂರು ತಾಲೂಕಿನ ಸುಪ್ರಸಿದ್ಧ ಮಲೆ ಮಹದೇಶ್ವರ ಸ್ವಾಮಿ ದೇವಾಲಯವು ಇಂದು ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಕೊರೊನಾದಿಂದ ಮಲೆ ಮಹದೇಶ್ಚರ ಬೆಟ್ಟದಲ್ಲಿ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ದೇವಾಲಯದ ಎಲ್ಲ ಸೇವೆಗಳನ್ನು ಪುನರ್ ಆರಂಭಿಸಲಾಗಿದ್ದು ಈ ಕುರಿತು ಜಿಲ್ಲಾಧಿಕಾರಿ ಎಂ.ಆರ್.ರವಿ ಆದೇಶ ಸಹ ಹೊರಡಿಸಿದ್ದಾರೆ. ದೇವಸ್ಥಾನದಲ್ಲಿ ಅನ್ನ ದಾಸೋಹ ಮತ್ತು ಜಾತ್ರೆಗಳು ಆರಂಭವಾಗಲಿದೆ. ಜೊತೆಗೆ, ಇಂದಿನಿಂದಲೇ ಬೆಳಗ್ಗೆ 4ಗಂಟೆಯ ಅಭಿಷೇಕ, ಸಂಜೆ 7ಗಂಟೆಯ ಅಭಿಷೇಕ ಹಾಗೂ ಎಲ್ಲಾ ಪೂಜಾ ಕೈಂಕರ್ಯಗಳು ಮತ್ತು ಇತರೆ ಸೇವೆಗಳು ಭಕ್ತರಿಗೆ ಲಭ್ಯವಾಗಲಿದೆ.
Follow Us



