ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಮತ್ತೊಂದು ಆಘಾತ: ಅರಣ್ಯ ಸಚಿವ ರಾಜೀವ್ ಬ್ಯಾನರ್ಜಿ ರಾಜೀನಾಮೆ..!

ಈಗಾಗಲೇ ರಾಜೀವ್ ಬ್ಯಾನರ್ಜಿ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕಳುಹಿಸಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಜೀವ್ ಬ್ಯಾನರ್ಜಿ ಬಿಜೆಪಿಗೆ ಸೇರುವ ಊಹಾಪೋಹಗಳು ತೀವ್ರಗೊಂಡಿವೆ.

  • TV9 Web Team
  • Published On - 13:56 PM, 22 Jan 2021
ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಮತ್ತೊಂದು ಆಘಾತ: ಅರಣ್ಯ ಸಚಿವ ರಾಜೀವ್ ಬ್ಯಾನರ್ಜಿ ರಾಜೀನಾಮೆ..!
ಅರಣ್ಯ ಸಚಿವ ರಾಜೀವ್ ಬ್ಯಾನರ್ಜಿ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಮತ್ತೊಂದು ಆಘಾತ ಎದುರಾಗಿದೆ. ರಾಜ್ಯ ಅರಣ್ಯ ಸಚಿವ ರಾಜೀವ್ ಬ್ಯಾನರ್ಜಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀವ್ ಬ್ಯಾನರ್ಜಿ ಅವರು ಮಮತಾ ಬ್ಯಾನರ್ಜಿ ಬಗ್ಗೆ ಬಹಳ ಸಮಯದಿಂದ ಅಸಮಾಧಾನ ಹೊಂದಿದ್ದರು.

ಈಗಾಗಲೇ ರಾಜೀವ್ ಬ್ಯಾನರ್ಜಿ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕಳುಹಿಸಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಜೀವ್ ಬ್ಯಾನರ್ಜಿ ಬಿಜೆಪಿಗೆ ಸೇರುವ ಊಹಾಪೋಹಗಳು ತೀವ್ರಗೊಂಡಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 30 ಮತ್ತು 31 ರಂದು ಬಂಗಾಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಆ ಸಮಯದಲ್ಲಿ ಅವರು ಬಿಜೆಪಿಗೆ ಸೇರಬಹುದು ಎಂಬ ಊಹಾಪೋಹಗಳು ಕೇಳಿಬಂದಿವೆ.

ಟಿಎಂಸಿಯ ಬಗ್ಗೆ ದೀರ್ಘಕಾಲದಿಂದ ಅತೃಪ್ತಿ ಹೊಂದಿದ್ದ ರಾಜೀವ್ ಬ್ಯಾನರ್ಜಿ ಅವರ ಮನವೊಲಿಸಲು ಹಲವಾರು ಸಭೆಗಳನ್ನು ನಡೆಸಿದ್ದರು. ಆದರೆ ಅಂತಿಮವಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಶಾಂತ್ ಕಿಶೋರ್ ಮತ್ತು ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ರಾಜೀವ್ ಬ್ಯಾನರ್ಜಿಗೆ ತೀವ್ರ ಅಸಮಾಧಾನವಿತ್ತು ಎಂದು ಹೇಳಲಾಗುತ್ತಿತ್ತು. ಹೀಗಾಗಿ ಅವರು ಪಕ್ಷದಲ್ಲಿ ಇದರ ವಿರುದ್ಧ ಧ್ವನಿ ಎತ್ತಿದರು, ಆದರೆ ಯಾವುದೇ ಪರಿಹಾರ ಸಿಗದ ಕಾರಣ ತೀವ್ರ ಅಸಮಾದಾನದಿಂದ ಇಂದು ಅವರು ರಾಜೀನಾಮೆ ನೀಡಿದ್ದಾರೆ. ಈಗಾಗಲೇ ಸಚಿವ ಸುವೇಂದು ಅಧಿಕಾರಿ ಮತ್ತು ಕ್ರೀಡಾ ರಾಜ್ಯ ಸಚಿವ ಲಕ್ಷ್ಮಿ ರತನ್ ಶುಕ್ಲಾ ಕೂಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ದೀದಿ ಬಲಗೈ ಸುವೇಂದು ಅಧಿಕಾರಿ ರಾಜೀನಾಮೆ: ಪಕ್ಷದ ಬಾಗಿಲು ಸದಾ ತೆರೆದಿದೆ ಎಂದ ಬಿಜೆಪಿ