ಹಾವೇರಿಯಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು, ಅನೈತಿಕ ಸಂಬಂಧವೇ ಪ್ರಾಣಕ್ಕೆ ಮುಳುವಾಯ್ತಾ?

ಹಾವೇರಿ: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಯುವಕನನ್ನು ಕೊಲೆ ಮಾಡಿ, ಮೃತದೇಹವನ್ನು ಎಸೆದು ಹೋಗಿರುವ ಆರೋಪ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಕೇಳಿಬಂದಿದೆ. ಜಿಲ್ಲೆಯ ಹಾನಗಲ್ ಪಟ್ಟಣದ ಹೊರವಲಯದಲ್ಲಿ ಘಟನೆ ಸಂಭವಿಸಿದ್ದು, ಸಂತೋಷ ವಾಲಿಕಾರ (32) ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ವ್ಯಕ್ತಿ. ಮೃತ ಸಂತೋಷ ಅದೇ ಗ್ರಾಮದ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎಂದು ತಿಳಿದುಬಂದಿದೆ. ಹೀಗಾಗಿ, ಆ ಮಹಿಳೆಯ ಸಂಬಂಧಿಕರೇ ಸಂತೋಷನನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ […]

ಹಾವೇರಿಯಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು, ಅನೈತಿಕ ಸಂಬಂಧವೇ ಪ್ರಾಣಕ್ಕೆ ಮುಳುವಾಯ್ತಾ?
Edited By:

Updated on: Aug 30, 2020 | 5:09 PM

ಹಾವೇರಿ: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಯುವಕನನ್ನು ಕೊಲೆ ಮಾಡಿ, ಮೃತದೇಹವನ್ನು ಎಸೆದು ಹೋಗಿರುವ ಆರೋಪ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಕೇಳಿಬಂದಿದೆ.
ಜಿಲ್ಲೆಯ ಹಾನಗಲ್ ಪಟ್ಟಣದ ಹೊರವಲಯದಲ್ಲಿ ಘಟನೆ ಸಂಭವಿಸಿದ್ದು, ಸಂತೋಷ ವಾಲಿಕಾರ (32) ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ವ್ಯಕ್ತಿ. ಮೃತ ಸಂತೋಷ ಅದೇ ಗ್ರಾಮದ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎಂದು ತಿಳಿದುಬಂದಿದೆ.

ಹೀಗಾಗಿ, ಆ ಮಹಿಳೆಯ ಸಂಬಂಧಿಕರೇ ಸಂತೋಷನನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಹಾನಗಲ್ PSI ಶ್ರೀಶೈಲ ಪಟ್ಟಣಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.