ಕೊಡಗು: ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಡಿಕೇರಿಯ ಜಿಲ್ಲಾಸ್ಪತ್ರೆ ಎದುರು ನಡೆದಿದೆ.
ರಸ್ತೆಗೆ ಅಡ್ಡಲಾಗಿ ನಿಂತಿರುವ ಕಾರನ್ನು ತೆಗೆಯುವಂತೆ ಹೇಳಿದ್ದಕ್ಕೆ ನಿಶಾಂತ್ ಎಂಬ ವ್ಯಕ್ತಿ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಹಲ್ಲೆ ಪ್ರಶ್ನಿಸಿದಕ್ಕೆ ಪೊಲೀಸ್ ಮೇಲೂ ಹಲ್ಲೆಗೆ ಮುಂದಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನಿಶಾಂತ್ ವಿರಾಜಪೇಟೆ ತಹಶೀಲ್ದಾರ್ ಕಾರಿನ ಗುತ್ತಿಗೆ ಆಧಾರದ ಚಾಲಕ.
ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಕ್ಕೆ ನಿಶಾಂತ್ನನ್ನು ಪೊಲೀಸರು ಬಂಧಿಸಿದ್ದಾರೆ. ನಿಶಾಂತ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.