
ಮೈಸೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ.
ಸ್ವಾತಂತ್ರ್ಯ ದಿನಾಚರಣೆ ಆಚರಣೆ ವೇಳೆ ಬಡಾವಣೆಗೆ ಹೆಸರಿಡುವ ವಿಚಾರಕ್ಕೆ ಗಲಾಟೆ ಶುರುವಾಗಿ ನಿವೃತ್ತ ಶಿಕ್ಷಕನಿಗೆ ಮೈಸೂರು ಕ್ಯಾನ್ಸರ್ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷನಾಗಿರುವ ರಮೇಶ್ ಚಪ್ಪಲಿಯಿಂದ ಹೊಡೆದಿದ್ದಾರೆ. ವಯಸ್ಸಿನ ಅಂತರವೂ ನೋಡದೇ ಚಪ್ಪಲಿಯಿಂದ ಮನಸ್ಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ಚಪ್ಪಲಿಯಲ್ಲಿ ಹೊಡೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಹಲ್ಲೆಗೊಳಗಾದ ನಿವೃತ್ತ ಶಿಕ್ಷಕ ಬಿಳಿಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.