ಜನತಾ ಕಾಲೋನಿಯಲ್ಲಿ ಚಾಕುವಿನಿಂದ ಚುಚ್ಚಿ ಚುಚ್ಚಿ ವ್ಯಕ್ತಿಯ ಬರ್ಬರ ಕೊಲೆ
ಬೆಂಗಳೂರು ಗ್ರಾಮಾಂತರ: ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಹರಿಯಾಣ ಮೂಲದ ಸಂಜಯ್ ಕುಮಾರ್ (38) ಎಂದು ಗುರುತಿಸಲಾಗಿದೆ. ಸಂಜಯ್ ಹರಿಯಾಣದಿಂದ ಆಗಮಿಸಿ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ಹೇಳಲಾಗಿದೆ. ಸಂಜಯ್ ಕಮಾರ್ನನ್ನು ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಚಾಕುವಿನಿಂದ ಹಲ್ಲೆಯಾದ ಬಳಿಕ ಸಂಜಯ್ ಮೆಟ್ಟಿಲುಗಳನ್ನು ಹತ್ತಿ ತನ್ನ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ್ದಾನೆ ಎಂದು […]
ಬೆಂಗಳೂರು ಗ್ರಾಮಾಂತರ: ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಹರಿಯಾಣ ಮೂಲದ ಸಂಜಯ್ ಕುಮಾರ್ (38) ಎಂದು ಗುರುತಿಸಲಾಗಿದೆ. ಸಂಜಯ್ ಹರಿಯಾಣದಿಂದ ಆಗಮಿಸಿ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ಹೇಳಲಾಗಿದೆ. ಸಂಜಯ್ ಕಮಾರ್ನನ್ನು ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಚಾಕುವಿನಿಂದ ಹಲ್ಲೆಯಾದ ಬಳಿಕ ಸಂಜಯ್ ಮೆಟ್ಟಿಲುಗಳನ್ನು ಹತ್ತಿ ತನ್ನ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಆದ್ರೆ, ನಂತರ ರಕ್ತದ ಮಡುವಿನಲ್ಲೇ ಬಿದ್ದು ಒದ್ದಾಡಿ ಕೊನೆಯುಸಿರೆಳೆದಿದ್ದಾನೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.