
ಬೆಂಗಳೂರು ಗ್ರಾಮಾಂತರ: ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಹರಿಯಾಣ ಮೂಲದ ಸಂಜಯ್ ಕುಮಾರ್ (38) ಎಂದು ಗುರುತಿಸಲಾಗಿದೆ. ಸಂಜಯ್ ಹರಿಯಾಣದಿಂದ ಆಗಮಿಸಿ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ಹೇಳಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.