
ಕೋಲಾರ: ಹಣದ ವಿಚಾರವಾಗಿ ಮನನೊಂದು ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲ್ಲೂಕು ಮದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ (33) ಆತ್ಮಹತ್ಯೆ ಮಾಡಿಕೊಂಡವರು.
ಆತ್ಮಹತ್ಯೆಗೂ ಮುನ್ನ ವಿಡಿಯೋ ಹಾಗೂ ಡೆತ್ ನೋಟ್ ಬರೆದಿಟ್ಟಿದ್ದು, ತನ್ನ ಸಂಬಂಧಿ ರಮೇಶ್ ಎಂಬುವವರಿಂದ ಮನನೊಂದು ಆತ್ಮಹತ್ಯೆ ಮಡಿಕೊಂಡಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.