ಹೆಂಡ್ತಿ ಮನೆಬಿಟ್ಟು ಹೋಗಿದ್ದಕ್ಕೆ ಮಕ್ಕಳಿಗೆ ವಿಷ ಉಣಿಸಿ ಆತ್ಮಹತ್ಯೆ ಮಾಡಿಕೊಂಡ ಪತಿರಾಯ

ಬೆಳಗಾವಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದ ಪತಿ ತನ್ನ ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗೂಡ ಗ್ರಾಮದಲ್ಲಿ ಈ ದಾರುಣ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಂದಿಗೆ ಮುನಿಸಿಕೊಂಡ ಹೆಂಡತಿ ಮನೆಬಿಟ್ಟು ಹೋಗಿದ್ದಳು. ಇದರಿಂದ ಮನನೊಂದ ಗಂಡ ರಾತ್ರಿ ಊಟದಲ್ಲಿ ವಿಷ ಬೆರೆಸಿ ಮಕ್ಕಳಿಗೆ ನೀಡಿದ್ದಾನೆ. ಬಳಿಕ ತಾನೂ ಅದನ್ನ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಮ್ಮಣ್ಣ ಗಿಡ್ಡಾಳೆ (38), […]

ಹೆಂಡ್ತಿ ಮನೆಬಿಟ್ಟು ಹೋಗಿದ್ದಕ್ಕೆ ಮಕ್ಕಳಿಗೆ ವಿಷ ಉಣಿಸಿ ಆತ್ಮಹತ್ಯೆ ಮಾಡಿಕೊಂಡ ಪತಿರಾಯ
Updated By:

Updated on: Jul 29, 2020 | 10:06 PM

ಬೆಳಗಾವಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದ ಪತಿ ತನ್ನ ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗೂಡ ಗ್ರಾಮದಲ್ಲಿ ಈ ದಾರುಣ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಂದಿಗೆ ಮುನಿಸಿಕೊಂಡ ಹೆಂಡತಿ ಮನೆಬಿಟ್ಟು ಹೋಗಿದ್ದಳು. ಇದರಿಂದ ಮನನೊಂದ ಗಂಡ ರಾತ್ರಿ ಊಟದಲ್ಲಿ ವಿಷ ಬೆರೆಸಿ ಮಕ್ಕಳಿಗೆ ನೀಡಿದ್ದಾನೆ. ಬಳಿಕ ತಾನೂ ಅದನ್ನ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಮ್ಮಣ್ಣ ಗಿಡ್ಡಾಳೆ (38), ಮಗಳು ಚಿನ್ನು ಗಿಡ್ಡಾಳೆ (2) ಹಾಗೂ ಮಗ ನಿರಂಜನ‌ ಗಿಡ್ಡಾಳೆ (10) ಮೃತ ದುರ್ದೈವಿಗಳು. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 3:14 pm, Tue, 28 July 20