ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವು!
ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ತಾಲೂಕಿನ ನಲ್ಲಕದಿರೇನಹಳ್ಳಿಯ 50 ವರ್ಷದ ವ್ಯಕ್ತಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ದೊಡ್ಡಬಳ್ಳಾಪುರದ ಬಳಿ 2762ನೇ ಸೋಂಕಿತನಿಗೆ ಅಪಘಾತವಾಗಿತ್ತು. ತಲೆಗೆ ತೀವ್ರವಾದ ಪೆಟ್ಟುಬಿದ್ದು ಆಸ್ಪತ್ರೆಗೆ ಸೇರಿದ್ದರು. ತಲೆಗೆ ಆಪರೇಷನ್ ಮಾಡುವುದಕ್ಕೂ ಮುನ್ನ ಕೊವಿಡ್ ಟೆಸ್ಟ್ ನಡೆಸಲಾಗಿತ್ತು. ನಿನ್ನೆ ಬಂದ ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ನಿಮ್ಹಾನ್ಸ್ ಆಸ್ಪತ್ರೆಯಿಂದ ಇಂದು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆಂದು ಟಿವಿ9ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ […]
ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ತಾಲೂಕಿನ ನಲ್ಲಕದಿರೇನಹಳ್ಳಿಯ 50 ವರ್ಷದ ವ್ಯಕ್ತಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ನಾಲ್ಕು ದಿನಗಳ ಹಿಂದೆ ದೊಡ್ಡಬಳ್ಳಾಪುರದ ಬಳಿ 2762ನೇ ಸೋಂಕಿತನಿಗೆ ಅಪಘಾತವಾಗಿತ್ತು. ತಲೆಗೆ ತೀವ್ರವಾದ ಪೆಟ್ಟುಬಿದ್ದು ಆಸ್ಪತ್ರೆಗೆ ಸೇರಿದ್ದರು. ತಲೆಗೆ ಆಪರೇಷನ್ ಮಾಡುವುದಕ್ಕೂ ಮುನ್ನ ಕೊವಿಡ್ ಟೆಸ್ಟ್ ನಡೆಸಲಾಗಿತ್ತು. ನಿನ್ನೆ ಬಂದ ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ನಿಮ್ಹಾನ್ಸ್ ಆಸ್ಪತ್ರೆಯಿಂದ ಇಂದು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆಂದು ಟಿವಿ9ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ ಮಾಹಿತಿ ನೀಡಿದ್ದಾರೆ. ಈವರೆಗೆ ಚಿಕ್ಕಬಳ್ಳಾಪುರದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.