ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವು!

| Updated By:

Updated on: May 29, 2020 | 6:31 PM

ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ತಾಲೂಕಿನ ನಲ್ಲಕದಿರೇನಹಳ್ಳಿಯ 50 ವರ್ಷದ ವ್ಯಕ್ತಿ ಬೆಂಗಳೂರಿನ ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ದೊಡ್ಡಬಳ್ಳಾಪುರದ ಬಳಿ 2762ನೇ ಸೋಂಕಿತನಿಗೆ ಅಪಘಾತವಾಗಿತ್ತು. ತಲೆಗೆ ತೀವ್ರವಾದ ಪೆಟ್ಟುಬಿದ್ದು ಆಸ್ಪತ್ರೆಗೆ ಸೇರಿದ್ದರು. ತಲೆಗೆ ಆಪರೇಷನ್ ಮಾಡುವುದಕ್ಕೂ ಮುನ್ನ ಕೊವಿಡ್ ಟೆಸ್ಟ್ ನಡೆಸಲಾಗಿತ್ತು. ನಿನ್ನೆ ಬಂದ ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ನಿಮ್ಹಾನ್ಸ್​ ಆಸ್ಪತ್ರೆಯಿಂದ ಇಂದು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆಂದು ಟಿವಿ9ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ […]

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವು!
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ.ಆರ್
Follow us on

ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ತಾಲೂಕಿನ ನಲ್ಲಕದಿರೇನಹಳ್ಳಿಯ 50 ವರ್ಷದ ವ್ಯಕ್ತಿ ಬೆಂಗಳೂರಿನ ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ನಾಲ್ಕು ದಿನಗಳ ಹಿಂದೆ ದೊಡ್ಡಬಳ್ಳಾಪುರದ ಬಳಿ 2762ನೇ ಸೋಂಕಿತನಿಗೆ ಅಪಘಾತವಾಗಿತ್ತು. ತಲೆಗೆ ತೀವ್ರವಾದ ಪೆಟ್ಟುಬಿದ್ದು ಆಸ್ಪತ್ರೆಗೆ ಸೇರಿದ್ದರು. ತಲೆಗೆ ಆಪರೇಷನ್ ಮಾಡುವುದಕ್ಕೂ ಮುನ್ನ ಕೊವಿಡ್ ಟೆಸ್ಟ್ ನಡೆಸಲಾಗಿತ್ತು. ನಿನ್ನೆ ಬಂದ ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ನಿಮ್ಹಾನ್ಸ್​ ಆಸ್ಪತ್ರೆಯಿಂದ ಇಂದು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆಂದು ಟಿವಿ9ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ ಮಾಹಿತಿ ನೀಡಿದ್ದಾರೆ. ಈವರೆಗೆ ಚಿಕ್ಕಬಳ್ಳಾಪುರದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.