ಮೈಸೂರು: ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಪ್ರವೀಣ್(29) ಮೃತ ದುರ್ದೈವಿ. 4ನೇ ಹಂತದ ಲಾಕ್ಡೌನ್ನಲ್ಲಿ ಸಡಿಲಿಕೆಯಾದ ಬಳಿಕ ಇಂದಿನಿಂದ ಕೆಲಸಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಬೈಕ್ ಮತ್ತು ಕಾರಿನ ನಡುವೆ ಅಪಘಾತವಾಗಿ ಖಾಸಗಿ ಕಾರ್ಖಾನೆ ಉದ್ಯೋಗಿ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿ ನಂಜನಗೂಡು ಪಟ್ಟಣದ ಶಿಕ್ಷಕರ ಬಡಾವಣೆಯ ನಿವಾಸಿ. ನಗರಸಭೆ ಮಾಜಿ ಸದಸ್ಯೆ ಸುಧಾ ಮಹೇಶ್ ಅವರ ಪುತ್ರ. ಪ್ರವೀಣ್ ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಲ್ ಬರ್ಗ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಲಾಕ್ಡೌನ್ನಿಂದಾಗಿ ಎರಡು ತಿಂಗಳಿಂದ ಮನೆಯಲ್ಲೇ ಇದ್ದ. ಲಾಕ್‌ಡೌನ್ ಸಡಿಲಿಕೆ ನಂತರ ಇಂದು ಕಾರ್ಖಾನೆ ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ.
Published On - 1:12 pm, Tue, 19 May 20