ರಸ್ತೆ ದಾಟುವ ವೇಳೆ ಕ್ಯಾಂಟರ್ ಡಿಕ್ಕಿ, ಪಾದಚಾರಿ ಸ್ಥಳದಲ್ಲೇ ಸಾವು

ಬೆಂಗಳೂರು ಗ್ರಾಮಾಂತರ: ರಸ್ತೆ ದಾಟುವ ವೇಳೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನೆಲಮಂಗಲ ತಾಲೂಕಿನ ಮಹದೇವಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ಸಂಭವಿಸಿದ್ದು, ರಸ್ತೆ ದಾಟುವ ವೇಳೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅಂದಾಜು 50 ವರ್ಷದ ಅಪರಿಚಿತ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಸದ್ಯ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ […]

ರಸ್ತೆ ದಾಟುವ ವೇಳೆ ಕ್ಯಾಂಟರ್ ಡಿಕ್ಕಿ, ಪಾದಚಾರಿ ಸ್ಥಳದಲ್ಲೇ ಸಾವು
Edited By:

Updated on: Aug 23, 2020 | 11:01 AM

ಬೆಂಗಳೂರು ಗ್ರಾಮಾಂತರ: ರಸ್ತೆ ದಾಟುವ ವೇಳೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ನೆಲಮಂಗಲ ತಾಲೂಕಿನ ಮಹದೇವಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ಸಂಭವಿಸಿದ್ದು, ರಸ್ತೆ ದಾಟುವ ವೇಳೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅಂದಾಜು 50 ವರ್ಷದ ಅಪರಿಚಿತ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

ಸದ್ಯ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನು ಘಟನೆಯ ಬಳಿಕ ಕ್ಯಾಂಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಚಾಲಕನ ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.

 

Published On - 11:00 am, Sun, 23 August 20