ಕಾಲು ಜಾರಿ ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ವ್ಯಕ್ತಿ ಸಾವು

ಮೈಸೂರು: ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ವ್ಯಕ್ತಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲುಪುರ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮೂಲದ ಅಮೃತ್ ಕುಮಾರ್ (30) ಮೃತ ವ್ಯಕ್ತಿ. ಗುತ್ತಿಗೆ ಆಧಾರದ ಮೇಲೆ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದ ಅಮೃತ್ ಕುಮಾರ್ ಕಬ್ಬು ಅರೆಯುವ ಯಂತ್ರವನ್ನು ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಕಾಲು ಜಾರಿ ಯಂತ್ರದ ಒಳಗೆ ಸಿಲುಕಿ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ನಂಜನಗೂಡು ಡಿವೈಎಸ್‌ಪಿ ಪ್ರಭಾಕರ್ ರಾವ್ ಸಿಂಧೆ, ವೃತ್ತ ನಿರೀಕ್ಷಕ […]

ಕಾಲು ಜಾರಿ ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ವ್ಯಕ್ತಿ ಸಾವು
Updated By: ಸಾಧು ಶ್ರೀನಾಥ್​

Updated on: Aug 17, 2020 | 10:24 AM

ಮೈಸೂರು: ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ವ್ಯಕ್ತಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲುಪುರ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮೂಲದ ಅಮೃತ್ ಕುಮಾರ್ (30) ಮೃತ ವ್ಯಕ್ತಿ.

ಗುತ್ತಿಗೆ ಆಧಾರದ ಮೇಲೆ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದ ಅಮೃತ್ ಕುಮಾರ್ ಕಬ್ಬು ಅರೆಯುವ ಯಂತ್ರವನ್ನು ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಕಾಲು ಜಾರಿ ಯಂತ್ರದ ಒಳಗೆ ಸಿಲುಕಿ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ನಂಜನಗೂಡು ಡಿವೈಎಸ್‌ಪಿ ಪ್ರಭಾಕರ್ ರಾವ್ ಸಿಂಧೆ, ವೃತ್ತ ನಿರೀಕ್ಷಕ ಲಕ್ಷ್ಮಿಕಾಂತ ತಳವಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 10:18 am, Mon, 17 August 20