ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಸ್ಥಳದಲ್ಲೇ ವ್ಯಕ್ತಿ ಸಾವು

ಹುಬ್ಬಳ್ಳಿ: ಲಾರಿಗೆ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ಸಮೀಪದ ಅದರಗುಂಚಿ‌ ಕ್ರಾಸ್‌ ಬಳಿ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಮಿಳುನಾಡಿನ ಮೂಲದ ಕಾರು, ಸೇಲಂ‌ನಿಂದ ಮುಂಬೈಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಯ್ಯನಾರ್(35) ಮೃತ ದುರ್ದೈವಿ. ರಸ್ತೆ ಪಕ್ಕ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಕಾರು ಬಂದು ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಕಾರಿನ‌ಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನು ಉಳಿದ ಗಾಯಗೊಂಡ ನಾಲ್ವರನ್ನು ಸ್ಥಳೀಯರು ರಕ್ಷಿಸಿ […]

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಸ್ಥಳದಲ್ಲೇ ವ್ಯಕ್ತಿ ಸಾವು
Edited By:

Updated on: Aug 13, 2020 | 11:07 AM

ಹುಬ್ಬಳ್ಳಿ: ಲಾರಿಗೆ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ಸಮೀಪದ ಅದರಗುಂಚಿ‌ ಕ್ರಾಸ್‌ ಬಳಿ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಮಿಳುನಾಡಿನ ಮೂಲದ ಕಾರು, ಸೇಲಂ‌ನಿಂದ ಮುಂಬೈಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಯ್ಯನಾರ್(35) ಮೃತ ದುರ್ದೈವಿ. ರಸ್ತೆ ಪಕ್ಕ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಕಾರು ಬಂದು ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

ಕಾರಿನ‌ಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನು ಉಳಿದ ಗಾಯಗೊಂಡ ನಾಲ್ವರನ್ನು ಸ್ಥಳೀಯರು ರಕ್ಷಿಸಿ ಜೀವ ಉಳಿಸಿದ್ದಾರೆ. ಅಪಘಾತವಾದ ಕಾರಿನ ಗ್ಲಾಸ್ ಒಡೆದು ಕಾರಿನಲ್ಲಿದ್ದ ನಾಲ್ವರನ್ನು ರಕ್ಷಿಸಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.