ಮಳೆ ಅವಾಂತರಕ್ಕೆ ವ್ಯಕ್ತಿ ಬಲಿ.. ಧರೆಗುರುಳಿದವು ಮನೆ, ಮರಗಳು

ಬೆಳಗಾವಿ: ಜಿಲ್ಲೆಯಲ್ಲಿ ವರ್ಷಧಾರೆ ನರ್ತನ ಜೋರಾಗಿದ್ದು, ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ರಣಭೀಕರ ಮಳೆಗೆ ಹುಕ್ಕೇರಿಯಲ್ಲಿ ವ್ಯಕ್ತಿ ಬಲಿಯಾಗಿದ್ದಾರೆ. ಹಾಗೂ ಅನೇಕ ಮನೆಗಳು ಕುಸಿದಿವೆ. ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಗ್ಯಾರೇಜ್ ಛಾವಣಿ ಕುಸಿದು ಅಸ್ಲಂ ಅಲ್ಲಾಖಾನ (52) ಎಂಬುವವರು ಮೃತಪಟ್ಟಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಳೆಯ ಅವಾಂತರಕ್ಕೆ ರಸ್ತೆಗಳು ಕೊಚ್ಚಿ ಹೋಗಿವೆ. 5 ಮನೆಗಳು ಧರೆಗುರುಳಿದ್ದು, ಪಿಡಬ್ಲ್ಯುಡಿ ಇಲಾಖೆಯ ಕಚೇರಿ ಕಾಂಪೌಂಡ್ ಗೋಡೆ ಸೇರಿದಂತೆ 10ಕ್ಕೂ ಹೆಚ್ಚು ಮನೆಗೋಡೆ ಕುಸಿದಿದೆ. ಇನ್ನು ವಿದ್ಯುತ್ ಕಂಬಗಳು ನೆಲಕ್ಕುರುಳಿದ […]

ಮಳೆ ಅವಾಂತರಕ್ಕೆ ವ್ಯಕ್ತಿ ಬಲಿ.. ಧರೆಗುರುಳಿದವು ಮನೆ, ಮರಗಳು
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Oct 12, 2020 | 10:51 AM

ಬೆಳಗಾವಿ: ಜಿಲ್ಲೆಯಲ್ಲಿ ವರ್ಷಧಾರೆ ನರ್ತನ ಜೋರಾಗಿದ್ದು, ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ರಣಭೀಕರ ಮಳೆಗೆ ಹುಕ್ಕೇರಿಯಲ್ಲಿ ವ್ಯಕ್ತಿ ಬಲಿಯಾಗಿದ್ದಾರೆ. ಹಾಗೂ ಅನೇಕ ಮನೆಗಳು ಕುಸಿದಿವೆ.

ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಗ್ಯಾರೇಜ್ ಛಾವಣಿ ಕುಸಿದು ಅಸ್ಲಂ ಅಲ್ಲಾಖಾನ (52) ಎಂಬುವವರು ಮೃತಪಟ್ಟಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಳೆಯ ಅವಾಂತರಕ್ಕೆ ರಸ್ತೆಗಳು ಕೊಚ್ಚಿ ಹೋಗಿವೆ. 5 ಮನೆಗಳು ಧರೆಗುರುಳಿದ್ದು, ಪಿಡಬ್ಲ್ಯುಡಿ ಇಲಾಖೆಯ ಕಚೇರಿ ಕಾಂಪೌಂಡ್ ಗೋಡೆ ಸೇರಿದಂತೆ 10ಕ್ಕೂ ಹೆಚ್ಚು ಮನೆಗೋಡೆ ಕುಸಿದಿದೆ. ಇನ್ನು ವಿದ್ಯುತ್ ಕಂಬಗಳು ನೆಲಕ್ಕುರುಳಿದ ಹಿನ್ನೆಲೆಯಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ. ನೀರಿನ ರಭಸಕ್ಕೆ ಕಾರೊಂದು ಕೊಚ್ಚಿ ಹೋಗಿ ತಗ್ಗು ಪ್ರದೇಶದಲ್ಲಿ ನಿಂತಿದೆ.

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us