ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಆಟೋದಲ್ಲೇ ವ್ಯಕ್ತಿ ಸಾವು
ಬೆಂಗಳೂರು: ನಗರದಲ್ಲಿ ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯ ಮುಂದುವರೆದಿದೆ. ಬೆಳಗ್ಗೆ ಕೂಡ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ವೃದ್ಧ ಬಲಿಯಾಗಿದ್ದರು. ಮತ್ತೆ ಇದೇ ರೀತಿಯ ಘಟನೆ ಮರುಕಳಿಸಿದೆ. ಅಸ್ತಮಾ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಬೆಳಗ್ಗೆಯಿಂದ ಆಸ್ಪತ್ರೆಗಳಿಗೆ ಅಲೆದಾಡಿದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಆಟೋದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಜಯನಗರದ ಗ್ಲೋಬಲ್ ಆಸ್ಪತ್ರೆ, ಶೋಭಾ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದರೂ ವ್ಯಕ್ತಿಗೆ ಚಿಕಿತ್ಸೆ ಸಿಕಿಲ್ಲ. ಕೊನೆಗೆ ಕೆ.ಸಿ.ಜನರಲ್ ಆಸ್ಪತ್ರೆಗೆ ಬರುತ್ತಿದ್ದಂತೆ ಆಟೋದಲ್ಲೇ ವ್ಯಕ್ತಿಯ ಪ್ರಾಣ ಪಕ್ಷಿ ಹಾರಿ ಹೋಗಿದೆ. […]

ಬೆಂಗಳೂರು: ನಗರದಲ್ಲಿ ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯ ಮುಂದುವರೆದಿದೆ. ಬೆಳಗ್ಗೆ ಕೂಡ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ವೃದ್ಧ ಬಲಿಯಾಗಿದ್ದರು. ಮತ್ತೆ ಇದೇ ರೀತಿಯ ಘಟನೆ ಮರುಕಳಿಸಿದೆ.
ಅಸ್ತಮಾ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಬೆಳಗ್ಗೆಯಿಂದ ಆಸ್ಪತ್ರೆಗಳಿಗೆ ಅಲೆದಾಡಿದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಆಟೋದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಜಯನಗರದ ಗ್ಲೋಬಲ್ ಆಸ್ಪತ್ರೆ, ಶೋಭಾ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದರೂ ವ್ಯಕ್ತಿಗೆ ಚಿಕಿತ್ಸೆ ಸಿಕಿಲ್ಲ.
ಕೊನೆಗೆ ಕೆ.ಸಿ.ಜನರಲ್ ಆಸ್ಪತ್ರೆಗೆ ಬರುತ್ತಿದ್ದಂತೆ ಆಟೋದಲ್ಲೇ ವ್ಯಕ್ತಿಯ ಪ್ರಾಣ ಪಕ್ಷಿ ಹಾರಿ ಹೋಗಿದೆ. ತಂದೆಯನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದು ಮಕ್ಕಳ ಕಣ್ಣೀರು ಹಾಕಿದ್ದಾರೆ. ಆಸ್ಪತ್ರೆಗಳ ಬೇಜವಾಬ್ದಾರಿಯಿಂದ ತಂದೆಯ ಸಾವಾಗಿದೆ ಎಂದು ಮಕ್ಕಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.