ಪತ್ನಿ ಮೇಲೆ ಹಲ್ಲೆಗೈದು ಪತಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದ ಪತಿರಾಯ ಇದೀಗ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ಘಟನೆ ನಡೆದಿದೆ.

  • TV9 Web Team
  • Published On - 22:29 PM, 23 Jan 2021
ಪತ್ನಿ ಮೇಲೆ ಹಲ್ಲೆಗೈದು ಪತಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು
ಪತ್ನಿ ಮೇಲೆ ಹಲ್ಲೆಗೈದು ಪತಿ ಆತ್ಮಹತ್ಯೆಗೆ ಯತ್ನ

ಹಾವೇರಿ: ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದ ಪತಿರಾಯ ಇದೀಗ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ಘಟನೆ ನಡೆದಿದೆ. ತನ್ನ ಪತ್ನಿ ಮಾದೇವಕ್ಕನ ಮೇಲೆ ಹಲ್ಲೆ ಮಾಡಿದ್ದ ಪತಿರಾಯ ಮೈಲಪ್ಪ ತಂಬೂರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಏನಿದು ಪ್ರಕರಣ?
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೈಲಪ್ಪ ತನ್ನ ಪತ್ನಿ ಮಾದೇವಕ್ಕನ ಮೇಲೆ ಮಚ್ಚಿನಿಂದ ಹಲ್ಲೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ. ತನ್ನ ಕತ್ತು ಕೊಯ್ದುಕೊಳ್ಳುವ ಮೂಲಕ ಮೈಲಪ್ಪ ಆತ್ಮಹತ್ಯೆಗೆ ಯತ್ನಿಸಿದ್ದ.

ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಗಾಯಾಳು ದಂಪತಿಯನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಿದ್ದರು. ಆದರೆ, ಇದೀಗ ಮೈಲಪ್ಪ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಸದ್ಯ, ಪತ್ನಿ ಮಾದೇವಕ್ಕಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೌಟುಂಬಿಕ ಕಲಹದಿಂದ ಮನನೊಂದು.. ಗೋಕಾಕ್ ಫಾಲ್ಸ್ ಮೇಲಿಂದ ಬಿದ್ದು ಟೆಕ್ಕಿ ಆತ್ಮಹತ್ಯೆ