ಭೀಕರ ಅಪಘಾತ: ಬೈಕ್-ಆಟೋಗೆ ಕಾರು ಡಿಕ್ಕಿ, ಬೈಕ್​ ಸವಾರ ಸ್ಥಳದಲ್ಲಿಯೆ ಸಾವು

ಬಳ್ಳಾರಿ: ಆಟೋ ಮತ್ತು ಬೈಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಬೈಕ್​ ಸವಾರ ಸ್ಥಳದಲ್ಲಿಯೆ ಸಾವನ್ನಪ್ಪಿರುವ ಘಟನೆ ಬಳ್ಳಾರಿ ತಾಲೂಕಿನ ಕಕ್ಕಬೇವಿನಹಳ್ಳಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಜಗದೀಶ್ (55) ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನು, ಆಟೋ ಚಾಲಕ ಯರಿಸ್ವಾಮಿ ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನ ಚಿಕಿತ್ಸೆಗಾಗಿ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಕ್ಕಿ ರಭಸಕ್ಕೆ ಸ್ಕಾರ್ಪಿಯೋ ಕಾರು ಪಲ್ಟಿಯಾಗಿದ್ದು, ಬಳ್ಳಾರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ […]

ಭೀಕರ ಅಪಘಾತ: ಬೈಕ್-ಆಟೋಗೆ ಕಾರು ಡಿಕ್ಕಿ, ಬೈಕ್​ ಸವಾರ ಸ್ಥಳದಲ್ಲಿಯೆ ಸಾವು

Updated on: Sep 09, 2020 | 6:45 PM

ಬಳ್ಳಾರಿ: ಆಟೋ ಮತ್ತು ಬೈಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಬೈಕ್​ ಸವಾರ ಸ್ಥಳದಲ್ಲಿಯೆ ಸಾವನ್ನಪ್ಪಿರುವ ಘಟನೆ ಬಳ್ಳಾರಿ ತಾಲೂಕಿನ ಕಕ್ಕಬೇವಿನಹಳ್ಳಿ ಗ್ರಾಮದ ಬಳಿ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಜಗದೀಶ್ (55) ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನು, ಆಟೋ ಚಾಲಕ ಯರಿಸ್ವಾಮಿ ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನ ಚಿಕಿತ್ಸೆಗಾಗಿ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಡಿಕ್ಕಿ ರಭಸಕ್ಕೆ ಸ್ಕಾರ್ಪಿಯೋ ಕಾರು ಪಲ್ಟಿಯಾಗಿದ್ದು, ಬಳ್ಳಾರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.