KSRTC ಬಸ್, ಬೊಲೇರೋ ಜೀಪ್​ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ತುಮಕೂರು: ಬೊಲೇರೋ ಜೀಪ್​ಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಜೀಪ್​ನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು,ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕೋಟನಾಯಕನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಕಡೆ ಹೋಗುತ್ತಿದ್ದ KSRTC ಬಸ್ ಬೊಲೇರೋ ಜೀಪ್​ಗೆ ಮುಖಾಮುಖಿ ಡಿಕ್ಕಿಯಾಗಿದೆ. ಇದರ ಪರಿಣಾಮ ಬೊಲೇರೋದಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜೊತೆಗೆ, ಜೀಪ್​ನ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಚಾಲಕನನ್ನು ತಿಪಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

KSRTC ಬಸ್, ಬೊಲೇರೋ ಜೀಪ್​ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​ Edited By:

Updated on: Sep 20, 2020 | 5:27 PM

ತುಮಕೂರು: ಬೊಲೇರೋ ಜೀಪ್​ಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಜೀಪ್​ನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು,ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕೋಟನಾಯಕನಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರಿನ ಕಡೆ ಹೋಗುತ್ತಿದ್ದ KSRTC ಬಸ್ ಬೊಲೇರೋ ಜೀಪ್​ಗೆ ಮುಖಾಮುಖಿ ಡಿಕ್ಕಿಯಾಗಿದೆ. ಇದರ ಪರಿಣಾಮ ಬೊಲೇರೋದಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜೊತೆಗೆ, ಜೀಪ್​ನ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಚಾಲಕನನ್ನು ತಿಪಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us