ಮದ್ಯ ಸೇವಿಸಲು ಹಣ ನೀಡದ್ದಕ್ಕೆ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಚ್ಚಿ ಕೊಲೆಗೈದ ಪಾಪಿ ಪತಿ
ವಿಜಯಪುರ: ಮದ್ಯ ಸೇವಿಸಲು ಹಣ ನೀಡದ್ದಕ್ಕೆ ಪಾಪಿ ಪತಿಯೊಬ್ಬ ಪತ್ನಿಯನ್ನು ಕೊಲೆಗೈದಿರುವ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ದೇವನಣಗಾಂವ್ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. 45 ವರ್ಷದ ಮಲಕವ್ವ ಹರಗೋಲ ಕೊಲೆಯಾದ ದುರ್ದೈವಿ. ಮದ್ಯ ಸೇವಿಸಲು ಹಣ ನೀಡದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಪತಿ ಶಿವಪ್ಪ ಹರಗೋಲ ಕೊಡಲಿಯಿಂದ ಕೊಚ್ಚಿ ಕೊಚ್ಚಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

ವಿಜಯಪುರ: ಮದ್ಯ ಸೇವಿಸಲು ಹಣ ನೀಡದ್ದಕ್ಕೆ ಪಾಪಿ ಪತಿಯೊಬ್ಬ ಪತ್ನಿಯನ್ನು ಕೊಲೆಗೈದಿರುವ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ದೇವನಣಗಾಂವ್ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. 45 ವರ್ಷದ ಮಲಕವ್ವ ಹರಗೋಲ ಕೊಲೆಯಾದ ದುರ್ದೈವಿ.
ಮದ್ಯ ಸೇವಿಸಲು ಹಣ ನೀಡದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಪತಿ ಶಿವಪ್ಪ ಹರಗೋಲ ಕೊಡಲಿಯಿಂದ ಕೊಚ್ಚಿ ಕೊಚ್ಚಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.



