15 ದಿನದಿಂದ ಪರದಾಡುತ್ತಿದ್ದರೂ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಮನೆಯಲ್ಲೇ ವ್ಯಕ್ತಿ ನರಳಾಟ
ಬೆಂಗಳೂರು: ನಗರದಲ್ಲಿ ಮತ್ತೆ ಅದೇ ನರಳಾಟ ಕೇಳಿ ಬರುತ್ತಿದೆ. ಕೆಮ್ಮು, ಜ್ವರದಿಂದ ಬಳಲುತ್ತಿರುವವರಿಗೆ ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳುತ್ತಿಲ್ಲ. ಬೆಂಗಳೂರಿನ ಕೆ.ಪಿ.ಅಗ್ರಹಾರದ ವ್ಯಕ್ತಿಗೆ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಕಳೆದ 15 ದಿನದಿಂದ ಸೂಕ್ತ ಚಿಕಿತ್ಸೆಗಾಗಿ ಒದ್ದಾಡುತ್ತಿದ್ದಾರೆ. ಆಸ್ಪತ್ರೆಗೆ ಹೋದರೆ ಬೆಡ್ ಇಲ್ಲವೆಂದು ವಾಪಸ್ ಕಳಿಸುತ್ತಿದ್ದಾರೆ. ವೈದ್ಯರು ಕೇವಲ ಮಾತ್ರೆಯನ್ನು ಕೊಟ್ಟು ಕಳಿಸಿದ್ದಾರೆ. ಆದರೆ ಈಗ ಆ ವ್ಯಕ್ತಿ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆ್ಯಂಬುಲೆನ್ಸ್‌ಗೆ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ. ಏನು ಮಾಡಬೇಕೆಂದು ದಿಕ್ಕುತೋಚದೆ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಆಸ್ಪತ್ರೆಗಳ […]
ಬೆಂಗಳೂರು: ನಗರದಲ್ಲಿ ಮತ್ತೆ ಅದೇ ನರಳಾಟ ಕೇಳಿ ಬರುತ್ತಿದೆ. ಕೆಮ್ಮು, ಜ್ವರದಿಂದ ಬಳಲುತ್ತಿರುವವರಿಗೆ ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳುತ್ತಿಲ್ಲ. ಬೆಂಗಳೂರಿನ ಕೆ.ಪಿ.ಅಗ್ರಹಾರದ ವ್ಯಕ್ತಿಗೆ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಕಳೆದ 15 ದಿನದಿಂದ ಸೂಕ್ತ ಚಿಕಿತ್ಸೆಗಾಗಿ ಒದ್ದಾಡುತ್ತಿದ್ದಾರೆ.
ಆಸ್ಪತ್ರೆಗೆ ಹೋದರೆ ಬೆಡ್ ಇಲ್ಲವೆಂದು ವಾಪಸ್ ಕಳಿಸುತ್ತಿದ್ದಾರೆ. ವೈದ್ಯರು ಕೇವಲ ಮಾತ್ರೆಯನ್ನು ಕೊಟ್ಟು ಕಳಿಸಿದ್ದಾರೆ. ಆದರೆ ಈಗ ಆ ವ್ಯಕ್ತಿ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆ್ಯಂಬುಲೆನ್ಸ್‌ಗೆ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ. ಏನು ಮಾಡಬೇಕೆಂದು ದಿಕ್ಕುತೋಚದೆ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ವ್ಯಕ್ತಿ ಮನೆಯಲ್ಲೇ ಕೆಮ್ಮಿ ಕೆಮ್ಮಿ ಉಸಿರಾಟದ ಸಮಸ್ಯೆಯಿಂದ ನರಳಾಡುತ್ತಿದ್ದಾರೆ.