ಬೆಂಗಳೂರು:ಕೊರೊನಾದಿಂದ ಗುಣಮುಖನಾದ ವ್ಯಕ್ತಿಯನ್ನು ಆಸ್ಪತ್ರೆಯ ಬಿಲ್ ಪಾವತಿ ಮಾಡಿಲ್ಲವೆಂದು ಎಂಟು ದಿನಗಳವರೆಗೆ ಡಿಸ್ಚಾರ್ಜ್ ಮಾಡದೆ. ಆತ ಹಾಸ್ಪಿಟಲ್ ಬೆಡ್ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಬೆಂಗಳೂರಿನ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ನಡೆದಿದೆ.
ಕೊರೋನಾ ಪಾಸಿಟಿವ್ ವರದಿ ಬಂದಿದ್ದ ವ್ಯಕ್ತಿಯನ್ನು ಬಿಬಿಎಂಪಿ ಸೂಚನೆ ಮೇರೆಗೆ ಸೆಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ವ್ಯಕ್ತಿ ಗುಣಮುಖನಾಗಿದ್ದಾನೆ. ಆದರೆ ಆಸ್ಪತ್ರೆಯ ಬಿಲ್ ಪಾವತಿಸಿಲ್ಲವೆಂದು ವ್ಯಕ್ತಿಯನ್ನು ಡಿಸ್ಚಾರ್ಜ್ ಮಾಡದೆ ಎಂಟು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಇರಿಸಿಕೊಂಡಿದ್ದಾರೆ. ಎಂಟು ದಿನಗಳ ನಂತರ ಸಂಬಂಧಿಕರಿಗೆ ಕರೆ ಮಾಡಿದ ಆಸ್ಪತ್ರೆ ಸಿಬ್ಬಂದಿ ನಿಮ್ಮ ಸಂಬಂಧಿ ಆಸ್ಪತ್ರೆ ಬೆಡ್ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ನೀವು ಬಂದು ಮೃತದೇಹವನ್ನು ತೆಗೆದುಕೊಂಡು ಹೋಗಿ ಎಂದಿದ್ದಾರೆ.
ಈಗಾಗಲೇ ಆಸ್ಪತ್ರೆ ಬಿಲ್ಲನ್ನು BBMP ಕಡೆಯಿಂದ ಪಾವತಿ ಮಾಡಲಾಗಿದ್ದರೂ ಸಹ ಮೃತದೇಹವನ್ನು ಸಂಬಂಧಿಕರಿಗೆ ನೀಡದೆ ಆಸ್ಪತ್ರೆ ಸಿಬ್ಬಂದಿಗಳು 2.5 ಲಕ್ಷ ಬಿಲ್ ಪಾವತಿ ಮಾಡಿ ಎನ್ನುತ್ತಿದ್ದಾರೆ. ಇದರಿಂದ ದಿಕ್ಕು ತೋಚದಂತಹ ಪರಿಸ್ಥಿತಿಯಲ್ಲಿರುವ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.