ಸೋಂಕಿನಿಂದ ಗುಣಮುಖನಾದ ವ್ಯಕ್ತಿ ಆಸ್ಪತ್ರೆಯಲ್ಲಿಯೇ ಸಾವು ಕಂಡರು! ಏಕೆ?

ಬೆಂಗಳೂರು:ಕೊರೊನಾದಿಂದ ಗುಣಮುಖನಾದ ವ್ಯಕ್ತಿಯನ್ನು ಆಸ್ಪತ್ರೆಯ ಬಿಲ್ ಪಾವತಿ ಮಾಡಿಲ್ಲವೆಂದು ಎಂಟು ದಿನಗಳವರೆಗೆ ಡಿಸ್ಚಾರ್ಜ್ ಮಾಡದೆ. ಆತ ಹಾಸ್ಪಿಟಲ್ ಬೆಡ್ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಬೆಂಗಳೂರಿನ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ನಡೆದಿದೆ. ಕೊರೋನಾ ಪಾಸಿಟಿವ್ ವರದಿ ಬಂದಿದ್ದ ವ್ಯಕ್ತಿಯನ್ನು ಬಿಬಿಎಂಪಿ ಸೂಚನೆ ಮೇರೆಗೆ ಸೆಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ವ್ಯಕ್ತಿ ಗುಣಮುಖನಾಗಿದ್ದಾನೆ. ಆದರೆ ಆಸ್ಪತ್ರೆಯ ಬಿಲ್ ಪಾವತಿಸಿಲ್ಲವೆಂದು ವ್ಯಕ್ತಿಯನ್ನು ಡಿಸ್ಚಾರ್ಜ್ ಮಾಡದೆ ಎಂಟು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಇರಿಸಿಕೊಂಡಿದ್ದಾರೆ. ಎಂಟು […]

ಸೋಂಕಿನಿಂದ ಗುಣಮುಖನಾದ ವ್ಯಕ್ತಿ ಆಸ್ಪತ್ರೆಯಲ್ಲಿಯೇ ಸಾವು ಕಂಡರು! ಏಕೆ?
ಸಾಧು ಶ್ರೀನಾಥ್​ Edited By:

Updated on: Jul 25, 2020 | 8:04 PM

ಬೆಂಗಳೂರು:ಕೊರೊನಾದಿಂದ ಗುಣಮುಖನಾದ ವ್ಯಕ್ತಿಯನ್ನು ಆಸ್ಪತ್ರೆಯ ಬಿಲ್ ಪಾವತಿ ಮಾಡಿಲ್ಲವೆಂದು ಎಂಟು ದಿನಗಳವರೆಗೆ ಡಿಸ್ಚಾರ್ಜ್ ಮಾಡದೆ. ಆತ ಹಾಸ್ಪಿಟಲ್ ಬೆಡ್ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಬೆಂಗಳೂರಿನ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ನಡೆದಿದೆ.

ಕೊರೋನಾ ಪಾಸಿಟಿವ್ ವರದಿ ಬಂದಿದ್ದ ವ್ಯಕ್ತಿಯನ್ನು ಬಿಬಿಎಂಪಿ ಸೂಚನೆ ಮೇರೆಗೆ ಸೆಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ವ್ಯಕ್ತಿ ಗುಣಮುಖನಾಗಿದ್ದಾನೆ. ಆದರೆ ಆಸ್ಪತ್ರೆಯ ಬಿಲ್ ಪಾವತಿಸಿಲ್ಲವೆಂದು ವ್ಯಕ್ತಿಯನ್ನು ಡಿಸ್ಚಾರ್ಜ್ ಮಾಡದೆ ಎಂಟು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಇರಿಸಿಕೊಂಡಿದ್ದಾರೆ. ಎಂಟು ದಿನಗಳ ನಂತರ ಸಂಬಂಧಿಕರಿಗೆ ಕರೆ ಮಾಡಿದ ಆಸ್ಪತ್ರೆ ಸಿಬ್ಬಂದಿ ನಿಮ್ಮ ಸಂಬಂಧಿ ಆಸ್ಪತ್ರೆ ಬೆಡ್ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ನೀವು ಬಂದು ಮೃತದೇಹವನ್ನು ತೆಗೆದುಕೊಂಡು ಹೋಗಿ ಎಂದಿದ್ದಾರೆ.

ಈಗಾಗಲೇ ಆಸ್ಪತ್ರೆ ಬಿಲ್ಲನ್ನು BBMP ಕಡೆಯಿಂದ ಪಾವತಿ ಮಾಡಲಾಗಿದ್ದರೂ ಸಹ ಮೃತದೇಹವನ್ನು ಸಂಬಂಧಿಕರಿಗೆ ನೀಡದೆ ಆಸ್ಪತ್ರೆ ಸಿಬ್ಬಂದಿಗಳು 2.5 ಲಕ್ಷ ಬಿಲ್ ಪಾವತಿ ಮಾಡಿ ಎನ್ನುತ್ತಿದ್ದಾರೆ. ಇದರಿಂದ ದಿಕ್ಕು ತೋಚದಂತಹ ಪರಿಸ್ಥಿತಿಯಲ್ಲಿರುವ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

Published On - 2:01 pm, Fri, 24 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us