ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಅಂತಾ.. ತಂಗಿಯನ್ನೇ ಕೊಂದ ಶ್ವಾನಪ್ರಿಯ ಅಣ್ಣ!

ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ತನ್ನ ಸ್ವಂತ ತಂಗಿಯನ್ನೇ ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. 25 ವರ್ಷದ ಆಶೀಶ್​ ಎಂಬಾತ ತನ್ನ ತಂಗಿ ಪಾರುಲ್​ (23) ಮೇಲೆ ಎರಡು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾನೆ.

ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಅಂತಾ.. ತಂಗಿಯನ್ನೇ ಕೊಂದ ಶ್ವಾನಪ್ರಿಯ ಅಣ್ಣ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 07, 2022 | 10:41 AM

ಲಕ್ನೋ: ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ತನ್ನ ಸ್ವಂತ ತಂಗಿಯನ್ನೇ ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. 25 ವರ್ಷದ ಆಶೀಶ್​ ಎಂಬಾತ ತನ್ನ ತಂಗಿ ಪಾರುಲ್​ (23) ಮೇಲೆ ಎರಡು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾನೆ.

ಶ್ವಾನ ಪ್ರಿಯನಾಗಿರುವ ಆಶೀಶ್ 2 ಡಜನ್​ಗೂ ಅಧಿಕ ನಾಯಿಗಳನ್ನು ಸಾಕಿದ್ದ. ಈ ನಡುವೆ, ಅವುಗಳಿಗೆ ಚಪಾತಿ ಮಾಡಿಕೊಡಲು ತನ್ನ ಸಹೋದರಿಯನ್ನು ಕೇಳಿಕೊಂಡಿದ್ದಾನೆ. ಆದರೆ, ಆತನ ತಂಗಿ ಇದಕ್ಕೆ ಒಪ್ಪದಿದ್ದಾಗ ಸಿಟ್ಟಾದ ಆಶೀಶ್​ ಪಾರುಲ್​ ತಲೆ ಮತ್ತು ಎದೆ ಭಾಗಕ್ಕೆ  ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಬಳಿಕ ತಾನೇ ಪೊಲೀಸರಿಗೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದ್ದಾನೆ.

ಈ ಬಗ್ಗೆ, ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸ್ ಅಧೀಕ್ಷಕ ದೆಹತ್ ಕೇಶವ್ ಕುಮಾರ್, 18-20 ನಾಯಿಗಳನ್ನು ನೋಡಿಕೊಳ್ಳಲು ಪಾರುಲ್ ನಿರಾಕರಿಸಿದ್ದಕ್ಕೆ, ಆಶೀಶ್ ಆಕೆಯನ್ನು  ಹತ್ಯೆಗೈದಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ. ಈ ವಿಚಾರವಾಗಿ ದಿನನಿತ್ಯವೂ ಅವರು ಜಗಳ ಮಾಡಿಕೊಳ್ಳುತ್ತಿದ್ದರು ಎಂದೂ ತಿಳಿಸಿದ್ದಾರೆ. ಪ್ರತಿನಿತ್ಯ 20 ಚಪಾತಿಗಳನ್ನು ಮಾಡುವಂತೆ ಆಶೀಶ್ ಪಾರುಲ್​ಗೆ ಪೀಡಿಸುತ್ತಿದ್ದ. ಇದರಿಂದ ಆಕೆ ಬೇಸತ್ತಿದ್ದಳು ಎಂದು ಕೇಶವ್ ಕುಮಾರ್ ಮಾಹಿತಿ ನೀಡಿದರು.

Published On - 2:15 pm, Tue, 15 December 20

ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು