ಕೊರೊನಾ ಭೀತಿ: ಐಸೋಲೇಷನ್​ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆತ್ಮಹತ್ಯೆ

| Updated By:

Updated on: May 24, 2020 | 12:08 PM

ಚಿಕ್ಕಮಗಳೂರು: ಕೊರೊನಾ ಸೋಂಕು ತಗುಲಿರುವ ಭೀತಿಯಿಂದ ಐಸೋಲೇಷನ್​ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕೊಪ್ಪ ಮೂಲದ 53 ವರ್ಷದ ವ್ಯಕ್ತಿ ಆಸ್ಪತ್ರೆಯ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾನೆ. ಕೊರೊನಾ ಸೋಂಕು ಅಟ್ಯಾಕ್ ಆಗಿರುವ ಶಂಕೆ ಹಿನ್ನೆಲೆಯಲ್ಲಿ ಕೊಪ್ಪ ಮೂಲದ ವ್ಯಕ್ತಿಯನ್ನು ಜಿಲ್ಲಾ ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಕೊವಿಡ್ ಟೆಸ್ಟ್ ವರದಿ ಬರುವುದಕ್ಕೂ ಮುನ್ನವೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊರೊನಾ ಸೋಂಕು ತಗುಲಿರುವ ಭಯದಿಂದ […]

ಕೊರೊನಾ ಭೀತಿ: ಐಸೋಲೇಷನ್​ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆತ್ಮಹತ್ಯೆ
Follow us on

ಚಿಕ್ಕಮಗಳೂರು: ಕೊರೊನಾ ಸೋಂಕು ತಗುಲಿರುವ ಭೀತಿಯಿಂದ ಐಸೋಲೇಷನ್​ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕೊಪ್ಪ ಮೂಲದ 53 ವರ್ಷದ ವ್ಯಕ್ತಿ ಆಸ್ಪತ್ರೆಯ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾನೆ.

ಕೊರೊನಾ ಸೋಂಕು ಅಟ್ಯಾಕ್ ಆಗಿರುವ ಶಂಕೆ ಹಿನ್ನೆಲೆಯಲ್ಲಿ ಕೊಪ್ಪ ಮೂಲದ ವ್ಯಕ್ತಿಯನ್ನು ಜಿಲ್ಲಾ ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಕೊವಿಡ್ ಟೆಸ್ಟ್ ವರದಿ ಬರುವುದಕ್ಕೂ ಮುನ್ನವೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊರೊನಾ ಸೋಂಕು ತಗುಲಿರುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Published On - 11:59 am, Sun, 24 May 20