Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಸಾಯ್ ಘಾಟ್: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲು

ಮಂಡ್ಯ: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ. ಶ್ರೀಪ್ರಸಾದ್(32) ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ. 3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಾಗೂ ಉಳಿದ ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. […]

ಗೋಸಾಯ್ ಘಾಟ್: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Oct 18, 2020 | 9:31 AM

ಮಂಡ್ಯ: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ. ಶ್ರೀಪ್ರಸಾದ್(32) ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ.

3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಾಗೂ ಉಳಿದ ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಇನ್ನು ಇದೇ ನದಿ ಅಂಚಿನ ಕೃಷಿ ಭೂಮಿಯಲ್ಲಿ ಶೆಡ್ ಹಾಕಿಕೊಂಡು ಅಕ್ರಮವಾಗಿ ಅಸ್ಥಿ ವಿಸರ್ಜನೆ ದಂಧೆ ನಡೆಸುತ್ತಿರುವ ಆರೋಪ ಕೇಳಿ ಬಂದಿದೆ. ಆದರೆ ಈ ಬಗ್ಗೆ ಅಧಿಕಾರಿಗಳು ಮೌನ ಧರಿಸಿದ್ದಾರೆ. ಸದ್ಯ ಯುವಕನ‌ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಅಜ್ಜಿ ಸಾವಿನ ಜೊತೆಗೆ ಮೊಮ್ಮಗನ ಸಾವಾಗಿದ್ದು, ಕುಟುಂಬಸ್ಥರಿಗೆ ಕಣ್ಣೀರೆ ನದಿಯಂತೆ ಹರಿದಿದೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹೇಳೋರು ಕೇಳೋರು ಇಲ್ವೇ? ಐತಿಹಾಸಿಕ ಕೋಟೆ ಕಲ್ಲು ಕೆಡವಿ ಅನಧಿಕೃತ ಶೆಡ್ ನಿರ್ಮಾಣ!

Published On - 9:29 am, Sun, 18 October 20

ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ