AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿಸಲು ಬಂದಿದ್ದ ಪೊಲೀಸರ ಬೈಕ್‌ಗೆ ಬೆಂಕಿ ಹಚ್ಚಿದ್ದ ಆರೋಪಿ ಕೊರೊನಾಗೆ ಬಲಿ, ಯಾರವನು?

ಗದಗ: ಚೂರಿ ಇರಿತ ಹಾಗೂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಬಂದಿದ್ದ ಪೊಲೀಸರ ಬೈಕಿಗೇ ಬೆಂಕಿ ಹಚ್ಚಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಆರೋಪಿ ಕೊರೊನಾ ಸೋಂಕಿನಿಂದ ಸಾವನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ನಾರಾಯಣಪುರ ಗ್ರಾಮದ ಸಂತೋಷ್ ಕೊರೊನಾ ಸೋಂಕಿಗಗೆ ಬಲಿಯಾಗಿರುವ ಆರೋಪಿಯಾಗಿದ್ದು, ಚೂರಿ ಇರಿತ ಹಾಗೂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 6 ರಂದು ಗದಗದ ಶಹರ ಪೊಲೀಸರು ನಾರಾಯಣಪುರ ಗ್ರಾಮಕ್ಕೆ ಅರೆಸ್ಟ್ ಮಾಡಲು ಬಂದಿದ್ದ ಪೊಲೀಸರಿಗೆ ಕೈಗೆ ಸಿಗದಂತೆ ಹೊಲದ ತುಂಬೆಲ್ಲಾ […]

ಬಂಧಿಸಲು ಬಂದಿದ್ದ ಪೊಲೀಸರ ಬೈಕ್‌ಗೆ ಬೆಂಕಿ ಹಚ್ಚಿದ್ದ ಆರೋಪಿ ಕೊರೊನಾಗೆ ಬಲಿ, ಯಾರವನು?
ಸಾಧು ಶ್ರೀನಾಥ್​
|

Updated on: Aug 10, 2020 | 7:20 PM

Share

ಗದಗ: ಚೂರಿ ಇರಿತ ಹಾಗೂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಬಂದಿದ್ದ ಪೊಲೀಸರ ಬೈಕಿಗೇ ಬೆಂಕಿ ಹಚ್ಚಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಆರೋಪಿ ಕೊರೊನಾ ಸೋಂಕಿನಿಂದ ಸಾವನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಗದಗ ಜಿಲ್ಲೆಯ ನಾರಾಯಣಪುರ ಗ್ರಾಮದ ಸಂತೋಷ್ ಕೊರೊನಾ ಸೋಂಕಿಗಗೆ ಬಲಿಯಾಗಿರುವ ಆರೋಪಿಯಾಗಿದ್ದು, ಚೂರಿ ಇರಿತ ಹಾಗೂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 6 ರಂದು ಗದಗದ ಶಹರ ಪೊಲೀಸರು ನಾರಾಯಣಪುರ ಗ್ರಾಮಕ್ಕೆ ಅರೆಸ್ಟ್ ಮಾಡಲು ಬಂದಿದ್ದ ಪೊಲೀಸರಿಗೆ ಕೈಗೆ ಸಿಗದಂತೆ ಹೊಲದ ತುಂಬೆಲ್ಲಾ ಓಡಾಡಿ ಗ್ರಾಮಕ್ಕೆ ಬಂದಿದ್ದಾನೆ.

ಆಗ ಅರೆಸ್ಟ್ ಮಾಡೋಕೆ ಬಂದಿದ್ದ ಪೊಲೀಸರ ಬೈಕ್ ಕಾಣಿಸಿವೆ. ಈ ನಟೋರಿಯಸ್ ಪೊಲೀಸರ ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ. ನಂತರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ರಿಂದ ಆಗಸ್ಟ್ 8 ರಂದು ಗ್ರಾಮೀಣ ಪೊಲೀಸರು ಹರಸಹಾಸ ಪಟ್ಟು ಬಂಧಿಸಿದ್ದಾರೆ.

ಆಗಸ್ಟ್ 7ರಂದು ಸಂತೋಷವನ್ನು ಬಂಧಿಸಿದ್ದ ಪೊಲೀಸರು ಆತನನ್ನು ನ್ಯಾಯಾಲಕ್ಕೆ ಒಪ್ಪಿಸುವ ಮುನ್ನವೇ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಟೆಸ್ಟ್ನಲ್ಲಿ ವರದಿ ಪಾಸಿಟಿವ್ ಬಂದಿದ್ದರಿಂದ ಆತನನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಸೇರಿಸಲಾಗಿತ್ತು.

ಆದರೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸಂತೋಷ್, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಆರೋಪಿ ಸಾವನ್ನಪ್ಪಿದ್ದರಿಂದ ಆತನನ್ನು ಬಂಧಿಸಿದ್ದ ಪೊಲೀಸರಿಗೆ ಕೊರೊನಾ ಆತಂಕ ಶುರುವಾಗಿದೆ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ