ಮಂಡ್ಯದ JDS ಟಿಕೆಟ್ ಆಕಾಂಕ್ಷಿಯಾಗಿದ್ದ.. ನಿವೃತ್ತ IRS ಅಧಿಕಾರಿ ಲಕ್ಷ್ಮೀ ಅಶ್ವಿನ್‌ಗೌಡ BJP ಸೇರ್ಪಡೆ ಮುಂದೂಡಿಕೆ
2018ರ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನಿವೃತ್ತ IRS ಅಧಿಕಾರಿ ಲಕ್ಷ್ಮೀ ಅಶ್ವಿನ್‌ಗೌಡ ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರು: 2018ರ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನಿವೃತ್ತ IRS ಅಧಿಕಾರಿ ಲಕ್ಷ್ಮೀ ಅಶ್ವಿನ್‌ಗೌಡ ನಾಳೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ, ಲಕ್ಷ್ಮೀ ಅಶ್ವಿನ್‌ಗೌಡ ಅವರ ಸೇರ್ಪಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂಬ ಮಾಹಿತಿ ದೊರೆತಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಉಪಸ್ಥಿತಿಯಲ್ಲಿ ನಿವೃತ್ತ IRS ಅಧಿಕಾರಿ ಸೇರ್ಪಡೆಯಾಗಲಿದ್ದಾರೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ ಕಾರಣಾಂತರದಿಂದ ಕಾರ್ಯಕ್ರಮದ ಮುಂದೂಡಿಕೆಯಾಗಿದೆ. ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ನ ಪ್ರಬಲ ಆಕಾಂಕ್ಷಿಯಾಗಿದ್ದ ಲಕ್ಷ್ಮೀ ಅವರ ಬದಲು ಶಿವರಾಮೇಗೌಡ ಅವರಿಗೆ ಪಕ್ಷದ ಟಿಕೆಟ್ ನೀಡಲಾಗಿತ್ತು.
ಜಮೀರ್ ಅಹ್ಮದ್ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಿಲ್ಲ -ಟಿವಿ9ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ
Published On - 10:38 pm, Fri, 15 January 21