AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮಲತಾಗೆ ಕೊರೊನಾ ಸೋಂಕು, ಹೋಂ ಕ್ವಾರಂಟೈನ್‌ ಆದ ಮಂಡ್ಯ ಸಂಸದೆ

ಬೆಂಗಳೂರು: ಮಂಡ್ಯದ ಸಂಸದೆ ಸುಮಲತಾ ಅಂಬರೀಷ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಆತಂಕಕಾರಿ ವಿಷಯವನ್ನ ಅವರೇ ಬಹಿರಂಗಪಡಿಸಿದ್ದಾರೆ. ಈ ಸಂಬಂಧ ಅವರ ಪುತ್ರ ಅಭಿಷೇಕ್ ಟಿವಿ9 ಜೊತೆ ಮಾತನಾಡಿದ್ದು, ತಮ್ಮ ತಾಯಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದಿದ್ದಾರೆ. ಈ ಸಂಬಂಧ ಫೇಸ್‌ಬುಕ್‌ ಪೋಸ್ಟ್​ ಹೀಗಿದೆ: ಆತ್ಮೀಯರೆ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ […]

ಸುಮಲತಾಗೆ ಕೊರೊನಾ ಸೋಂಕು, ಹೋಂ ಕ್ವಾರಂಟೈನ್‌ ಆದ ಮಂಡ್ಯ ಸಂಸದೆ
Guru
| Edited By: |

Updated on:Jul 06, 2020 | 6:29 PM

Share

ಬೆಂಗಳೂರು: ಮಂಡ್ಯದ ಸಂಸದೆ ಸುಮಲತಾ ಅಂಬರೀಷ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಆತಂಕಕಾರಿ ವಿಷಯವನ್ನ ಅವರೇ ಬಹಿರಂಗಪಡಿಸಿದ್ದಾರೆ. ಈ ಸಂಬಂಧ ಅವರ ಪುತ್ರ ಅಭಿಷೇಕ್ ಟಿವಿ9 ಜೊತೆ ಮಾತನಾಡಿದ್ದು, ತಮ್ಮ ತಾಯಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದಿದ್ದಾರೆ.

ಈ ಸಂಬಂಧ ಫೇಸ್‌ಬುಕ್‌ ಪೋಸ್ಟ್​ ಹೀಗಿದೆ: ಆತ್ಮೀಯರೆ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ.

ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿದ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ. -ಸುಮಲತಾ ಅಂಬರೀಷ್, ಸದಸ್ಯೆ, ಮಂಡ್ಯ ಲೋಕಸಭಾ ಕ್ಷೇತ್ರ

https://www.facebook.com/SumalathaAmbi/posts/900728177071075

Published On - 6:22 pm, Mon, 6 July 20

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ