ದಕ್ಷಿಣ ಕನ್ನಡ: ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರಿಗೆ ಸೋಂಕು ದೃಢವಾಗಿದೆ. ಸೋಂಕಿತರ ಸಂಪರ್ಕದಿಂದ ವೈರಸ್ ತಗಲಿರುವ ಶಂಕೆ ವ್ಯಕ್ತವಾಗಿದೆ. ಶಾಸಕರು ಸ್ವಯಂ ಪ್ರೇರಿತವಾಗಿ ತಪಾಸಣೆ ಮಾಡಿಸಿಕೊಂಡ ವೇಳೆ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಖುದ್ದು ಭರತ್ ಶೆಟ್ಟಿಯವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮಂಗಳೂರಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕರು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಹೀಗಾಗಿ, ಇದೀಗ ಶಾಸಕರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಬಗ್ಗೆ ಆರೋಗ್ಯಾಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
I have been tested COVID19 positive.
With all your blessings, I'm recovering & will be under treatment for few days.Requesting everyone to please maintain social distancing, wear mask while going out and wash hands frequently.
Please take care of yourselves & your near one's.— Dr Bharath Shetty (@bharathshetty_y) July 2, 2020
Published On - 8:16 pm, Thu, 2 July 20