MITಯಲ್ಲಿ 52 ವಿದ್ಯಾರ್ಥಿಗಳಿಗೆ ಕೊರೊನಾ: ಕಾಲೇಜು ಕ್ಯಾಂಪಸ್​ ಆಯ್ತು ಕಂಟೇನ್ಮೆಂಟ್ ಜೋನ್

ಜಿಲ್ಲೆಯ ಮಣಿಪಾಲದಲ್ಲಿರುವ ಪ್ರತಿಷ್ಠಿತ MIT ಕಾಲೇಜಿನಲ್ಲಿ ಇಂದು 27 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ಆದ್ದರಿಂದ ಕಾಲೇಜು ಕ್ಯಾಂಪಸ್​ನ ಇದೀಗ ಕಂಟೇನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.

MITಯಲ್ಲಿ 52 ವಿದ್ಯಾರ್ಥಿಗಳಿಗೆ ಕೊರೊನಾ: ಕಾಲೇಜು ಕ್ಯಾಂಪಸ್​ ಆಯ್ತು ಕಂಟೇನ್ಮೆಂಟ್ ಜೋನ್
ಮಣಿಪಾಲ್​ ಇನ್​ಸ್ಟಿಟ್ಯೂಟ್ ಆಫ್​ ಟೆಕ್ನಾಲಜಿ
Follow us
KUSHAL V
| Updated By: Lakshmi Hegde

Updated on:Mar 18, 2021 | 11:47 AM

ಉಡುಪಿ: ಜಿಲ್ಲೆಯಲ್ಲಿ ಇಂದು 42 ಜನರಿಗೆ ಕೊರೊನಾ ದೃಢಪಟ್ಟಿದೆ. ಇದಲ್ಲದೆ, ಜಿಲ್ಲೆಯ ಮಣಿಪಾಲದಲ್ಲಿರುವ ಪ್ರತಿಷ್ಠಿತ MIT ಕಾಲೇಜಿನಲ್ಲಿ ಇಂದು 27 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದ್ದು, ಒಟ್ಟು 52 ವಿದ್ಯಾರ್ಥಿಗಳು ಕೊರೊನಾ ಸೋಂಕಿತರಾಗಿದ್ದಾರೆ. ಆದ್ದರಿಂದ ಕಾಲೇಜು ಕ್ಯಾಂಪಸ್​ನ ಇದೀಗ ಕಂಟೇನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಕಾಲೇಜಿಗೆ ಬಂದಿದ್ದ ಅಂತಾರಾಜ್ಯ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ, ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲೂ ಕೊರೊನಾ ಪತ್ತೆಯಾಗಿದೆ ಎಂದು ಉಡುಪಿ ಡಿಹೆಚ್​ಒ ಡಾ.ಸುಧೀರ್ ಚಂದ್ರಸೂಡ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿಂದು ಹೊಸದಾಗಿ 1,275 ಜನರಿಗೆ ಕೊರೊನಾ ದೃಢವಾಗಿದೆ. ಇದೀಗ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 9,63,614ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಈವರೆಗೆ ಕೊರೊನಾದಿಂದ 12,407 ಜನರ ಅಸುನೀಗಿದ್ದಾರೆ. ಇದಲ್ಲದೆ, ಸೋಂಕಿತರ ಪೈಕಿ 9,40,968 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 10,220 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 786 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,13,485ಕ್ಕೇರಿದೆ. ಇಂದು ನಗರದಲ್ಲಿ ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ. ಈವರೆಗೆ ಕೊರೊನಾಗೆ 4,530 ಜನರ ಅಸುನೀಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಸಕ್ಕರೆ ನಾಡಿನಿಂದ ಕಹಿ ಸುದ್ದಿ: ಲೈನ್​ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಸಿಎಂ BSY ತವರೂರಲ್ಲಿ ಪವರ್​​ಮ್ಯಾನ್​ ಸಾವು

Published On - 11:20 pm, Wed, 17 March 21

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್