ಫುಟ್ಬಾಲ್ ಲೋಕದ ದಂತಕಥೆ ಹಾಗೂ ಅರ್ಜೆಂಟೀನಾದ ಮಾಜಿ ಫುಟ್ಬಾಲ್ ಆಟಗಾರ ಡಿಯೇಗೋ ಮರಡೋನಾಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮರಡೋನ್ರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಅರ್ಜೆಂಟೀನಾದ ರಾಜಧಾನಿ ಬ್ಯೂನೋಸ್ ಏರೆಸ್ನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.
ಸರ್ಜರಿ ಬಳಿಕ ಮಾತನಾಡಿದ ವೈದ್ಯರು ಶಸ್ತ್ರಚಿಕಿತ್ಸೆ ನಂತರ ಡಿಯೇಗೋ ಮರಡೋನ ಚೇತರಿಕೆ ಕಾಣುತ್ತಿದ್ದಾರೆ. ಆದರೆ, ಕೆಲವು ದಿನಗಳ ಕಾಲ ಅವರ ಆರೋಗ್ಯ ಸ್ಥಿತಿ ಮೇಲೆ ನಿಗಾ ವಹಿಸಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.