ಮಾರ್ಕಂಡೇಯ ನದಿ ಪ್ರವಾಹಕ್ಕೆ 5 ಸಾವಿರ ಹೆಕ್ಟೇರ್ ಜಲಾವೃತ, ಕಬ್ಬು ಮತ್ತು ಭತ್ತ ಹಾನಿ

ಬೆಳಗಾವಿ: ಮಾರ್ಕಂಡೇಯ ನದಿ ಪ್ರವಾಹಕ್ಕೆ ಮತ್ತೆ ಬೆಳೆ ಕಳೆದುಕೊಂಡು ಬೆಳಗಾವಿ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ನದಿ ಪಾತ್ರದ ಐದು ಸಾವಿರ ಹೆಕ್ಟೇರ್​ಗೂ ಅಧಿಕ ಬೆಳೆ ಜಲಾವೃತಗೊಂಡಿದೆ. ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆ ಹಾನಿಯಾಗಿದೆ. ಕಳೆದ ವರ್ಷವೂ ಇದೇ ಭಾಗದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ವರ್ಷ ಕೂಡ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಬೆಳಗಾವಿ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ಜಮೀನುಗಳು ಹೆಚ್ಚು ಹಾನಿಗೊಳಗಾಗಿವೆ. ಬೆಳೆ ಸರ್ವೆ ಮಾಡಿಸಿ ಸೂಕ್ತ […]

ಮಾರ್ಕಂಡೇಯ ನದಿ ಪ್ರವಾಹಕ್ಕೆ 5 ಸಾವಿರ ಹೆಕ್ಟೇರ್ ಜಲಾವೃತ, ಕಬ್ಬು ಮತ್ತು ಭತ್ತ ಹಾನಿ
ಆಯೇಷಾ ಬಾನು

Updated on: Aug 22, 2020 | 8:24 AM

ಬೆಳಗಾವಿ: ಮಾರ್ಕಂಡೇಯ ನದಿ ಪ್ರವಾಹಕ್ಕೆ ಮತ್ತೆ ಬೆಳೆ ಕಳೆದುಕೊಂಡು ಬೆಳಗಾವಿ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ನದಿ ಪಾತ್ರದ ಐದು ಸಾವಿರ ಹೆಕ್ಟೇರ್​ಗೂ ಅಧಿಕ ಬೆಳೆ ಜಲಾವೃತಗೊಂಡಿದೆ. ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆ ಹಾನಿಯಾಗಿದೆ.

ಕಳೆದ ವರ್ಷವೂ ಇದೇ ಭಾಗದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ವರ್ಷ ಕೂಡ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಬೆಳಗಾವಿ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ಜಮೀನುಗಳು ಹೆಚ್ಚು ಹಾನಿಗೊಳಗಾಗಿವೆ. ಬೆಳೆ ಸರ್ವೆ ಮಾಡಿಸಿ ಸೂಕ್ತ ಪರಿಹಾರ ನೀಡಲು ಸರ್ಕಾರಕ್ಕೆ ರೈತರು ಒತ್ತಾಯಿಸಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us